
ಅಪಘಾತದ ಬಳಿಕ ಕಾರೊಂದು ಹೊತ್ತಿ ಉರಿದ ಪರಿಣಾಮ ಒಂದೇ ಕುಟುಂಬದ ಐವರು ಸಜೀವ ದಹನಗೊಂಡಿರುವ ದಾರುಣ ಘಟನೆ ನಡೆದಿದೆ.
ಛತ್ತೀಸ್ಘಡದ ರಾಜನಂದ್ಗಾಂವ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಅಪಘಾತದ ನಂತರ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.
ಈ ವೇಳೆ ಕಾರಿನಿಂದ ಹೊರ ಬರಲಾಗದೆ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಜೀವ ದಹನಗೊಂಡಿದ್ದಾರೆಂದು ರಾಜನಂದ್ಗಾಂವ್ ಜಿಲ್ಲೆ ಎಸ್.ಪಿ. ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.