ಶಿವಮೊಗ್ಗ:
ಮೆಗ್ಗಾನ್ ಆಸ್ಪತ್ರೆ ಕಾಂಪೌಂಡ್ ಬಳಿ ಸುಸ್ತಾಗಿ ಬಿದ್ದಿದ್ದ ಸುಮಾರು 45 ರಿಂದ 50 ವರ್ಷದ ಅಪರಿಚಿತ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೇ ಡಿ.23 ರಂದು ಮೃತಪಟ್ಟಿರುತ್ತಾನೆ.
ಮೃತನು ಸುಮಾರು 5 ಅಡಿ 9 ಇಂಚು ಎತ್ತರ, ಕಪ್ಪು ಮೈ ಬಣ್ಣ, ಕೋಲು ಮುಖ, ತೆಳುವಾದ ಮೈಕಟ್ಟು ಹೊಂದಿದ್ದು, 02 ಇಂಚು ಉದ್ದದ ಬಿಳಿ ಕೂದಲು, ಗಡ್ಡ ಮೀಸೆ ಇರುತ್ತದೆ. ಎಡಗೈಯಲ್ಲಿ ‘ರಾಮರಾಜ್ಯ.ಎಸ್’ ಎಂಬ ಹಚ್ಚೆ ಗುರುತು ಇರುತ್ತದೆ. ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ಸಂಖ್ಯೆ : 08182-261414/9611761255 ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.