alex Certify ಅಪ್ಪನ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಪುತ್ರಿ ಧೃತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪ್ಪನ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಪುತ್ರಿ ಧೃತಿ

ಬೆಂಗಳೂರು: ಅಮೆರಿಕಾದಿಂದ ಆಗಮಿಸಿರುವ ಪುನೀತ್ ರಾಜ್ ಕುಮಾರ್ ಪುತ್ರಿ ಧೃತಿ ತಂದೆಯ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದು, ದುಃಖ ತಾಳಲಾರದೇ ತಾಯಿಯನ್ನು ತಬ್ಬಿಕೊಂಡು ಕಣ್ಣೀರಿಟ್ಟಿದ್ದಾರೆ.

ಅಮೆರಿಕಾದಿಂದ ಜರ್ಮನಿ, ಜರ್ಮನಿಯಿಂದ ದೆಹಲಿಗೆ ಬಂದಿಳಿದ ಧೃತಿ ಏರ್ ಇಂಡಿಯಾ ವಿಮಾನದ ಮೂಲಕ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಅಲ್ಲಿಂದ ನೇರವಾಗಿ ಸದಾಶಿವನಗರದ ಮನೆಗೆ ತೆರಳಿದ ಧೃತಿ ಬಳಿಕ ಕಂಠೀರವ ಸ್ಟೇಡಿಯಂಗೆ ಆಗಮಿಸಿದ್ದು, ತಂದೆಯ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ತಂದೆಯ ಪಾರ್ಥಿವ ಶರೀರದ ಎದುರು ಧೃತಿ ಬಿಕ್ಕಿಬಿಕ್ಕಿ ಅತ್ತಿದ್ದು, ತಂದೆಯ ತಲೆಯನ್ನು ಮುಟ್ಟಿ ಅಂತಿಮ ನಮನ ಸಲ್ಲಿಸಿದರು.

ಅಪ್ಪು ಪಾದಕ್ಕೆ ನಮಸ್ಕರಿಸಿದ ಪುತ್ರಿ ಧೃತಿ ಕಣ್ಣೀರು

ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ, ಮಕ್ಕಳಾದ ವಂದಿತಾ ಹಾಗೂ ಧೃತಿ ಇಬ್ಬರನ್ನು ತಬ್ಬಿಕೊಂಡು ಕಣ್ಣೀರಿಟ್ಟಿದ್ದು, ರಾಜ್ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...