alex Certify ಅಪ್ರಾಪ್ತೆಯನ್ನು ಅನುಚಿತವಾಗಿ ಸ್ಪರ್ಶಿಸಿದ ವೃದ್ಧನಿಗೆ ಜೈಲು ಶಿಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪ್ರಾಪ್ತೆಯನ್ನು ಅನುಚಿತವಾಗಿ ಸ್ಪರ್ಶಿಸಿದ ವೃದ್ಧನಿಗೆ ಜೈಲು ಶಿಕ್ಷೆ

ಮುಂಬೈ: ಅಪ್ರಾಪ್ತ ಬಾಲಕಿಯನ್ನು ಅನುಚಿತವಾಗಿ ಸ್ಪರ್ಶಿಸಿದ 72 ವರ್ಷದ ವ್ಯಕ್ತಿಗೆ ಪೋಕ್ಸೊ ಪ್ರಕರಣದಡಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಅಡಿಯಲ್ಲಿ ಪ್ರಕರಣಗಳನ್ನು ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯ, 2018 ರಲ್ಲಿ ತನ್ನ ಅಪ್ರಾಪ್ತ ನೆರೆಯವರಿಗೆ ಲೈಂಗಿಕ ಕಿರುಕುಳ ನೀಡಿದ 72 ವರ್ಷದ ವ್ಯಕ್ತಿಯನ್ನು ದೋಷಿ ಎಂದು ತೀರ್ಪು ನೀಡಿದೆ.

ವಿಶೇಷ ನ್ಯಾಯಾಧೀಶರು ಅವಿನಾಶ್ ಧುರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದು, 10,000 ರೂ. ದಂಡವನ್ನೂ ವಿಧಿಸಿದ್ದಾರೆ. ವರದಿ ಪ್ರಕಾರ, ಜನವರಿ 31,  2018 ರಂದು, ಬಾಲಕಿ ಶಾಲೆಯಿಂದ ಮಧ್ಯಾಹ್ನ 3 ಗಂಟೆಗೆ ಮರಳಿದ್ದಳು.

ಬಾಲಕಿಯನ್ನು ಒಬ್ಬಂಟಿಯಾಗಿ ನೋಡಿದ ಧುರಿ, 7 ವರ್ಷದ ಮಗುವಿಗೆ ಚಾಕೊಲೇಟ್ ನೀಡುವುದಾಗಿ ಆಮಿಷವೊಡ್ಡಿದ್ದಾನೆ. ಬಳಿಕ ಬಾಲಕಿಯನ್ನು ಕಟ್ಟಡದ ತಾರಸಿಗೆ ಕರೆದೊಯ್ದು ಅನುಚಿತವಾಗಿ ಸ್ಪರ್ಶಿಸಿದ್ದಾನೆ. ಅಲ್ಲದೆ ಘಟನೆ ಬಗ್ಗೆ ಯಾರಿಗಾದ್ರೂ ಹೇಳಿದ್ರೆ ಟೆರೇಸ್‌ನಿಂದ ಕೆಳಗೆ ಎಸೆಯುವುದಾಗಿ ಬೆದರಿಕೆ ಹಾಕಿದ್ದಾನೆ.

ಆದರೆ ಬಾಲಕಿ ತನ್ನ ಸಹೋದರಿ ಮತ್ತು ತಾಯಿಗೆ ಘಟನೆಯನ್ನು ಹೇಳಿದ್ದಾಳೆ. ನಂತರ ಆಕೆಯ ತಾಯಿ ಕಲಾಚೌಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಕೋರ್ಟ್ ಆರೋಪಿಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...