ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ 400 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 2020, 2021, 2022 ಮತ್ತು 2019ರ ಅಕ್ಟೋಬರ್ ನಲ್ಲಿ ಪದವಿ ಪಾಸಾದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಸ್ಟೈಫಂಡ್ ನೀಡಲಾಗುತ್ತಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 7 ಅಂತಿಮ ದಿನಾಂಕವಾಗಿದೆ.
ಉದ್ಯೋಗದ ಸ್ಥಳ ಬೆಂಗಳೂರು ಆಗಿದ್ದು ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 8000 – 9008 ರೂಪಾಯಿಗಳ ಸ್ಟೈಫಂಡ್ ನೀಡಲಾಗುತ್ತದೆ. ಮೆರಿಟ್ ಹಾಗೂ ಸಂದರ್ಶನ ಆಧರಿಸಿ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅಕ್ಟೋಬರ್ 15 ರಿಂದ ಆರಂಭವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ವಿದ್ಯುತ್ ನಿಗಮ ನಿಯಮಿತದ ಅಧಿಕೃತ ವೆಬ್ಸೈಟ್ bescom.org ಗೆ ಭೇಟಿ ನೀಡಬಹುದಾಗಿದೆ.