ಅಮೆರಿಕದ ಮೇರಿಲ್ಯಾಂಡ್‌ನ ನಿವಾಸಿ ರಾಘವೇಂದ್ರ ಅವರು ಪ್ರಧಾನಿ ನರೇಂದ್ರ ಮೋದಿಯವರ ಬಹು ನಿರೀಕ್ಷಿತ ಅಮೇರಿಕಾ ಪ್ರವಾಸಕ್ಕೂ ಮೊದಲು ತಮ್ಮ ಕಾರಿನ ನಂಬರ್ ಪ್ಲೇಟ್ ನಲ್ಲಿ “NMODI” ಎಂದು ಹಾಕಿಸಿಕೊಂಡಿದ್ದು ಖುಷಿ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಭಿಮಾನಿಯಾಗಿರುವ ರಾಘವೇಂದ್ರ ಅವರು 2016 ರಲ್ಲಿ ‘NARENDRA MODI’ ಎಂಬ ಶೀರ್ಷಿಕೆಯ ನಂಬರ್ ಪ್ಲೇಟ್ ನೀಡಬೇಕೆಂದು ಕೇಳಿದ್ದರು. ಆದರೆ ಅಧಿಕಾರಿಗಳು ನಿರಾಕರಿಸಿದ ನಂತರ ‘NMODI’ ಎಂಬ ಶೀರ್ಷಿಕೆ ನೀಡಿದ್ದಾರೆಂದು ತಿಳಿಸಿದರು.
ಭಾರತ ಮತ್ತು ಅಮೆರಿಕ ನಡುವೆ ಬಲವಾದ ಸಂಬಂಧವಿದೆ ಎಂದು ಹೇಳುವ ರಾಘವೇಂದ್ರ, ಪ್ರಧಾನಿ ಮೋದಿ ತಮಗೆ ಸ್ಫೂರ್ತಿ ಎಂದು ತಿಳಿಸಿದ್ದಾರೆ. ನರೇಂದ್ರ ಮೋದಿ ಅವರು ನನಗೆ ಸ್ಪೂರ್ತಿಯಾಗಿದ್ದಾರೆ. ದೇಶಕ್ಕಾಗಿ, ಸಮಾಜಕ್ಕಾಗಿ, ಜಗತ್ತಿಗೆ ಏನಾದರೂ ಒಳ್ಳೆಯದನ್ನು ಮಾಡಲು ಅವರು ನನ್ನನ್ನು ಪ್ರೇರೇಪಿಸುತ್ತಾರೆ. ಪ್ರಧಾನಿ ಮೋದಿ ಇಲ್ಲಿಗೆ ಬರುತ್ತಿದ್ದಾರೆ. ಹಾಗಾಗಿ ಅವರನ್ನು ಸ್ವಾಗತಿಸಲು ಕಾತುರದಿಂದ ಕಾಯುತ್ತಿದ್ದೇನೆ ಎಂದು ರಾಘವೇಂದ್ರ ಹೇಳಿದ್ದಾರೆ.
ರಾಘವೇಂದ್ರ ಮತ್ತು ಸಾವಿರಾರು ಭಾರತೀಯ-ಅಮೆರಿಕನ್ನರು ಪ್ರಧಾನಿ ನರೇಂದ್ರ ಮೋದಿ ಪ್ರವಾಸಕ್ಕಾಗಿ ಯುಎಸ್‌ಗೆ ಆಗಮಿಸುತ್ತಾರೆ ಎಂದು ಕಾತುರದಿಂದ ಕಾಯುತ್ತಿದ್ದಾರೆ.
ಪ್ರಧಾನಿಯವರು ಜೂನ್ 21 ರಿಂದ ಜೂನ್ 24 ರವರೆಗೆ ಯುಎಸ್‌ನಲ್ಲಿ ಇರುತ್ತಾರೆ. ಅವರು ಜೂನ್ 21 ರಂದು ಯುಎನ್ ಜನರಲ್ ಅಸೆಂಬ್ಲಿ ಅಧ್ಯಕ್ಷ ಸಿಸಾಬಾ ಕೊರೊಸಿ ಮತ್ತು ವಿಶ್ವಸಂಸ್ಥೆಯ ಉಪ ಪ್ರಧಾನ ಕಾರ್ಯದರ್ಶಿ ಅಮಿನಾ ಜೆ. ಮೊಹಮ್ಮದ್ ಅವರೊಂದಿಗೆ ಅಂತರರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮದೊಂದಿಗೆ ತಮ್ಮ ಪ್ರವಾಸವನ್ನು ಪ್ರಾರಂಭಿಸುತ್ತಾರೆ.