ಚೆನ್ನೈ: ನಟ, ರಾಜಕಾರಣಿ ಕಮಲ್ ಹಾಸನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಸ್ವತಃ ಕಮಲ್ ಹಾಸನ್ ಮಾಹಿತಿ ನೀಡಿದ್ದಾರೆ.
ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಕಮಲ್ ಹಾಸನ್, ತಾನು ಅಮೇರಿಕಾ ಪ್ರವಾಸ ಮುಗಿಸಿ ವಾಪಸ್ ಆಗುತ್ತಿದ್ದಂತೆ ಸ್ವಲ್ಪ ಕೆಮ್ಮು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ಕೋವಿಡ್ ಪಾಸಿಟಿವ್ ಎಂದು ದೃಢಪಟ್ಟಿದೆ ಎಂದು ಹೇಳಿದ್ದಾರೆ.
ಕೋವಿಡ್ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಐಸೋಲೇಟ್ ಆಗಿದ್ದೇನೆ. ಸಾಂಕ್ರಾಮಿಕ ರೋಗ ಇನ್ನೂ ಕೊನೆಯಾಗಿಲ್ಲ. ಎಲ್ಲರೂ ಕಾಳಜಿ ವಹಿಸಿ ಎಂದು ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.