alex Certify ಅಮೆರಿಕ ಚಂಡಮಾರುತದ ಹೊಡೆತಕ್ಕೆ ಸಾವನ್ನಪ್ಪಿದವರ ಸಂಖ್ಯೆ 80ಕ್ಕೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಮೆರಿಕ ಚಂಡಮಾರುತದ ಹೊಡೆತಕ್ಕೆ ಸಾವನ್ನಪ್ಪಿದವರ ಸಂಖ್ಯೆ 80ಕ್ಕೆ ಏರಿಕೆ

ವಾಷಿಂಗ್ಟನ್ : ಭೀಕರ ಚಂಡಮಾರುತದ ಪ್ರವಾಹಕ್ಕೆ ಸಿಲುಕಿರುವ ಅಮೆರಿಕದಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದೆ. ಸದ್ಯ ಈ ಭಯಕಂರ ಚುಂಡಮಾರುತಕ್ಕೆ ಬಲಿಯಾದವರ ಸಂಖ್ಯೆ 80ಕ್ಕೆ ಏರಿಕೆ ಕಂಡಿದೆ ಎನ್ನಲಾಗಿದೆ.

ಇದು ಇತಿಹಾಸದಲ್ಲಿಯೇ ಭಯಂಕರ ಘಟನೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಚಂಡಮಾರುತದ ಬಗ್ಗೆ ಸಂಪೂರ್ಣ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಹೀಗಾಗಿ ಸಾವು – ನೋವಿನ ನಿಖರ ಮಾಹಿತಿ ಇಲ್ಲ. ಎಲ್ಲೆಡೆ ಕಾರ್ಯಾರಣೆ ನಡೆಯುತ್ತಿದೆ. ಈಗಾಗಲೇ 70ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಕುರಿತು ತಿಳಿದು ಬಂದಿದೆ. ಹಲವರು ನಾಪತ್ತೆಯಾಗಿದ್ದಾರೆ ಎಂದು ಹೇಳಿದ್ದಾರೆ.

ಅಲ್ಲಿನ ಕೆಂಟಕಿ ರಾಜ್ಯದಲ್ಲಿ ಚಂಡಮಾರುತದ ತೀವ್ರತೆ ಹೆಚ್ಚಾಗಿದೆ. ಅಲ್ಲಿ ಈ ಘಟನೆಯಿಂದ ಸಾವನ್ನಪ್ಪಿದವರ ಸಂಖ್ಯೆ ನೂರರ ಗಡಿ ದಾಟಬಹುದು ಎಂದು ಅಲ್ಲಿನ ರಾಜ್ಯಪಾಲ ಆಂಡಿ ಬೆಶಿಯರ್ ಹೇಳಿದ್ದಾರೆ.

ಹವಾಮನ ವೈಪರೀತ್ಯ ಸೇರಿದಂತೆ ಹಲವು ಕಾರಣಗಳಿಂದ ಚಂಡಮಾರುತ ಉಂಟಾಗಿದೆ ಎಂದು ವಿಜ್ಞಾನಿಗಳು ಅಂದಾಜಿಸಿದ್ದಾರೆ. ಈಗಾಗಲೇ ಕೆಂಟಕಿಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...