ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ದೀಪಾವಳಿ ಹಬ್ಬದ ಪ್ರಯುಕ್ತ ದೀಪೋತ್ಸವವನ್ನು ಉದ್ಘಾಟಿಸಿ ಬಳಿಕ ದೇಗುಲದಲ್ಲಿ ಪೂಜೆ ಸಲ್ಲಿಸಲಿದ್ದಾರೆ.
ಈ ಸಂದರ್ಭದಲ್ಲಿ ಸುಮಾರು 18 ಲಕ್ಷ ಹಣತೆಗಳನ್ನು ಬೆಳಗಿಸಲಾಗುತ್ತಿದ್ದು, 22 ಸಾವಿರಕ್ಕೂ ಅಧಿಕ ಸ್ವಯಂಸೇವಕರು ಇವುಗಳನ್ನು ಬೆಳಗಿಸಲಿದ್ದಾರೆ.
ಅಯೋಧ್ಯೆಯಲ್ಲಿ ಈಗ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, 6ನೇ ವರ್ಷದ ದೀಪೋತ್ಸವದ ಅಂಗವಾಗಿ ಲೇಸರ್ ಶೋ ಪ್ರದರ್ಶನ ಸಹ ನಡೆಯಲಿದೆ.