alex Certify ಅಯೋಧ್ಯೆ ಶ್ರೀರಾಮ ಮಂದಿರ 2024 ರಲ್ಲಿ ಭಕ್ತರ ಪ್ರವೇಶಕ್ಕೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಯೋಧ್ಯೆ ಶ್ರೀರಾಮ ಮಂದಿರ 2024 ರಲ್ಲಿ ಭಕ್ತರ ಪ್ರವೇಶಕ್ಕೆ ಅವಕಾಶ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯವಾದ ಶ್ರೀರಾಮ ಮಂದಿರ 2024ರ ಜನವರಿ ವೇಳೆಗೆ ಭಕ್ತರ ಪ್ರವೇಶಕ್ಕೆ ಅವಕಾಶ ಸಿಗಲಿದೆ ಎಂದು ಶ್ರೀರಾಮ ಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.

ಈ ಕುರಿತಂತೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಂದಿರದ ಕಾಮಗಾರಿ ಈಗಾಗಲೇ ಶೇಕಡ 50ರಷ್ಟು ಪೂರ್ಣಗೊಂಡಿದ್ದು, ಮುಂದಿನ ವರ್ಷದ ಡಿಸೆಂಬರ್ ವೇಳೆಗೆ ಮುಕ್ತಾಯದ ಹಂತಕ್ಕೆ ತಲುಪುತ್ತದೆ ಎಂದು ಹೇಳಿದ್ದಾರೆ.

2024ರ ಮಕರ ಸಂಕ್ರಾಂತಿ ಸಂದರ್ಭದಲ್ಲಿ ದೇಗುಲದ ಗರ್ಭಗುಡಿಯಲ್ಲಿ ರಾಮಲಲ್ಲನ ವಿಗ್ರಹಗಳನ್ನು ಪ್ರತಿಷ್ಠಾಪಿಸಿದ ಬಳಿಕ ಅದೇ ತಿಂಗಳಿನಲ್ಲಿ ಭಕ್ತರಿಗೆ ದರ್ಶನಕ್ಕಾಗಿ ದೇಗುಲವನ್ನು ತೆರೆಯಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...