ವಿಜಯಪುರ: ಅಯ್ಯಪ್ಪ ಸ್ವಾಮಿ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಸಿಂದಗಿಯ ಜಗದೀಶ ಕಲಬುರ್ಗಿ ಎಂಬಾತನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದೆ.
ಜಗದೀಶ್ ಕಲಬುರ್ಗಿ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ್ದು, ಅಯ್ಯಪ್ಪ ಮಾಲಾಧಾರಿಗಳು ಸಿಂದಗಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಜಗದೀಶ ಕಲಬುರ್ಗಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದೆ. ಶ್ರೀ ಧರ್ಮಶಾಸ್ತ್ರ ಸೇವಾ ಸಮಿತಿಯಿಂದ ಜಗದೀಶ್ ವಿರುದ್ಧ ದೂರು ನೀಡಲಾಗಿದೆ. ವಿಜಯಪುರ ಜಿಲ್ಲೆ ಸಿಂದಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಕ್ರಮ ಕೈಗೊಂಡಿದ್ದಾರೆ.