
ಬೆಂಗಳೂರು: ಸುಳ್ಳು ಸ್ಲೋಗನ್ ಸೃಷ್ಟಿಕರ್ತ, ಟರ್ಮಿನೇಟರ್, ಸಿದ್ದಕಲೆಯ ನಿಪುಣಾಗ್ರೇಸರರು ಈಗ JDF ಎಂಬ ಹೊಸ ಜಪ ಮಾಡಿಕೊಂಡು ಜಾತ್ಯಾತೀತ ತತ್ವಾದರ್ಶಗಳಿಗೆ ಮಂಡ್ಯದಲ್ಲಿ ಎಳ್ಳುನೀರು ಬಿಟ್ಟಿದ್ದಾರೆ. ಸಹಕಾರ ಸಚಿವರ ಸಹಾಯಕನನ್ನು ಗೆಲ್ಲಿಸಿಕೊಳ್ಳಲು ಜಾತಿ ಸಹಕಾರಕ್ಕೆ ಮೊರೆ ಹೋಗಿದ್ದಾರೆ ಇದೆಂಥ ದುರ್ವಿಧಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮತಫಸಲಿಗಾಗಿ ಜಾತಿ ರಾಜಕೀಯ ಮಾಡುತ್ತಿರುವ ನಕಲಿ ಜಾತ್ಯಾತೀತ ಶೂರನ ಅಸಲಿ ರೂಪ ಕಳಚಿದೆ. ಸಮುದಾಯದ ಅಧ್ಯಕ್ಷರೊಬ್ಬರು ನೀವು ಮತ ಹಾಕಿವುದು ಕಾಂಗ್ರೆಸ್ ಪಕ್ಷಕ್ಕಲ್ಲ, ನಮ್ಮ ಸಮುದಾಯದ ಸಿದ್ಧಕಲಾಕೋವಿದನಿಗೆ ಎಂದು ಮನೆಮನೆಗೂ ಹೋಗಿ ಪ್ರಚಾರ ಮಾಡುತ್ತಿರುವುದು ಮಂಡ್ಯದಲ್ಲಿ ಮಜಭೂತಾಗಿ ನಡೆಯುತ್ತೆ. ಹೇಳುವುದು ಒಂದು ಮಾಡುವುದು ಇನ್ನೊಂದು ಎಂದು ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
ಒಮಿಕ್ರಾನ್ ಆತಂಕದ ಮಧ್ಯೆ ರಾಜ್ಯದ ಜನತೆಗೆ ಇಲ್ಲಿದೆ ನೆಮ್ಮದಿ ಸುದ್ದಿ
ಅವರಿಗೆ ಜೆಡಿಎಸ್ ಫೋಬಿಯಾ ಕಾಡುತ್ತಿದೆ. ಚುನಾವಣೆ ಬಂದರೆ ಜೆಡಿಎಸ್ ಚಳಿ, ಜ್ವರ ಹತ್ತುತ್ತದೆ. ಜ್ವರ ಬಿಡಿಸಿಕೊಳ್ಳಲು ಸಿದ್ಧಸೂತ್ರದಾರ ಬಳಸುವ ಹೊಸ ಔಷಧವೇ JDF. ಜೆಡಿಎಸ್ ಬಿಜೆಪಿ ಬಿ ಟೀಂ ಎನ್ನುವವರು ಸಹಕಾರ ಸಚಿವರ ಸಹಾಯಕನನ್ನು ಅಭ್ಯರ್ಥಿ ಮಾಡಿದ್ದು ಯಾರಿಗೆ ಸಹಕಾರ ನೀಡಲು? ಬಿಜೆಪಿ ಬೈಯ್ಯುವವರು ಅವದೇ ಪಕ್ಷದ ಸಚಿವರ ಪಿಎ ಗೆ ಟಿಕೆಟ್ ಕೊಟ್ಟಿದ್ದರ ಒಳಲೆಕ್ಕ ಏನು? ಯಾರ ಲೆಕ್ಕ ಚುಕ್ತಾ ಮಾಡಲು? ಎಂದು ಪ್ರಶ್ನಿಸಿದ್ದಾರೆ.
ರಾಜಕೀಯ ಆರಂಭಿಸಿದ ಮಾತೃಪಕ್ಷವನ್ನೇ ಕ್ರೂರವಾಗಿ ಮುಳುಗಿಸಲು ಹೊರಟ ಆ ನಾಯಕರು, ’ಕೈ’ ಹಿಡಿದ ಸ್ವಪಕ್ಷವನ್ನೂ ಸ್ವಾಹಾ ಮಾಡುತ್ತಿದ್ದಾರೆ.”ವಿನಾಶಕಾಲೇ ವಿಪರೀತ ಸುಳ್ಳು’ ಆ ಸುಳ್ಳುಗಳೇ ಅವರನ್ನು ಸುಡುತ್ತವೆ ಎಂದು ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.