ತುಮಕೂರು: ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ನೈತಿಕತೆ ಇಲ್ಲ, ಡಿಕೆಶಿ ತಿಹಾರ್ ಜೈಲಿಗೆ ಹೋಗಿಬಂದಿದ್ದೇಕೆ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಕಾಂಗ್ರೆಸ್ ನಾಯಕರು ಭ್ರಷ್ಟಾಚಾರದಲ್ಲಿಯೇ ಜೈಲುವಾಸ ಅನುಭವಿಸಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ಆರೋಪ ಮಾಡಲು ಡಿಕೆಶಿಗೆ ನಾಚಿಕೆಯಾಗಬೇಕು. ತಿಹಾರ್ ಜೈಲಿಗೆ ಡಿಕೆಶಿ ಭಾರತದ ಇತಿಹಾಸ ಓದಲು ಹೋಗಿದ್ದರಾ? ಎಂದು ಕಿಡಿಕಾರಿದ್ದಾರೆ.
ಬೆಂಗಳೂರು ನಿವಾಸಿಗಳೇ ಗಮನಿಸಿ: ಸೋಮವಾರದಂದು ಈ ಭಾಗಗಳ ನೀರು ಪೂರೈಕೆಯಲ್ಲಿ ಆಗಲಿದೆ ವ್ಯತ್ಯಯ
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣವನ್ನು ಕೈಗೆತ್ತಿಕೊಂಡರೆ ವಿಪಕ್ಷ ನಾಯಕ ಸಿದ್ದರಾಮಯ್ಯ ಜೈಲಿಗೆ ಹೋಗ್ತಾರೆ. 1 ಕೋಟಿ ರೂಪಾಯಿ ವಾಚ್ ಸುಮ್ಮನೆ ಕೊಟ್ಟಿದ್ದಾರಾ? ಅರ್ಕಾವತಿ ಪ್ರಕರಣವನ್ನು ಸಿದ್ದರಾಮಯ್ಯ ನೆನಪು ಮಾಡಿಕೊಳ್ಳಲಿ ಎಂದು ಹೇಳಿದರು.
ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮವನ್ನು ಸಿಐಡಿ ನಿಸ್ಪಕ್ಷಪಾತವಾಗಿ ತನಿಖೆ ನಡೆಸುತ್ತಿದೆ. ಸಿಎಂ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ಅಭಿನಂದನೆ ಸಲ್ಲಿಸಬೇಕು. ನಮ್ಮ ಸಿಎಂ ಗೆ ಶಕ್ತಿಯಿದೆ. ಸರ್ಕಾರಕ್ಕೆ ಧೈರ್ಯವಿದೆ. ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದ ಯಾರನ್ನೂ ಬಿಡುವುದಿಲ್ಲ. ಅಕ್ರಮದಲ್ಲಿ ಶೇ.80ರಷ್ಟು ಕಾಂಗ್ರೆಸ್ ನಾಯಕರು ಜೈಲಿಗೆ ಹೋಗ್ತಾರೆ ಎಂದು ಹೇಳಿದರು.