![](https://kannadadunia.com/wp-content/uploads/2023/06/application-web-780x405-1-1.jpg)
ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ಯೋಜನೆಯಡಿ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತರ ಸಮುದಾಯದ ಜನರಿಗೆ ವ್ಯಾಪಾರ, ಸಣ್ಣ ಪ್ರಮಾಣದ ಗುಡಿ ಕೈಗಾರಿಕೆ, ಸೇವಾ ಕ್ಷೇತ, ಕೃಷಿಆಧಾರಿತ ಚಟುವಟಿಕೆಗಳು ಮುಂತಾದಹುಗಳನ್ನು ಪ್ರಾರಂಭಿಸಲು ಸಾಲ ಮತ್ತು ಸಹಾಯಧನ ಓದಗಿಸಲಾಗುವುದು. ಘಟಕ ವೆಚ್ಚದ ಶೇ.33 ಅಥವಾ ಗರಿಷ್ಠ ಮಿತಿ ರೂ.1 ಲಕ್ಷದ ಸಹಾಯಧನ ನೀಡಲಾಗುವುದು.
ಯೋಜನೆಯಡಿ ಅರ್ಜಿ ಸಲ್ಲಿಸಲು ಅರ್ಜಿದಾರರು ಸರ್ಕಾರಿ ಆದೇಶದಲ್ಲಿ ವಿವರಿಸಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು. ಎಲ್ಲಾ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದಲ್ಲಿ ರೂ. 81,000 ಹಾಗೂ ನಗರ ಪ್ರದೇಶದಲ್ಲಿ 1,03,000 ಗಿಂತ ಕಡಿಮೆ ಇರಬೇಕು. ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ, ರಾಜ್ಯ ಸರ್ಕಾರಿ ಅಥವಾ ಪಿ.ಎಸ್.ಯು ಉದ್ಯೋಗಿಯಾಗಿರಬಾರದು. ಅರ್ಜಿದಾರರು ಕೆ.ಎಂ.ಡಿ.ಸಿ.ಯಲ್ಲಿ ಸುಸ್ತಿದಾರರಾಗಿರಬಾರದು.
ಅರ್ಹ ಅಭ್ಯರ್ಥಿಗಳು ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ/ ಅಲ್ಪಸಂಖ್ಯಾತ ಪ್ರಮಾಣಪತ್ರ, ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣಪತ್ರ, ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ), ಯೋಜನಾ ವರದಿಯೊಂದಿಗೆ ವೇಬ್‌ಸೈಟ್: kmdconline.karnataka.gov.in ನಲ್ಲಿ ಆನ್‌ಲೈನ್ ಮೂಲಕ ಫೆಬ್ರವರಿ 29 ರೊಳಗಾಗಿ ಅರ್ಜಿ ಸಲ್ಲಿಸಬೇಕು.