ರಾಜ್ಯದಲ್ಲಿ ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭಾ ಚುನಾವಣೆ ನಡೆಯಬೇಕಿದ್ದು, ಇದರ ಮಧ್ಯೆ ಅವಧಿ ಪೂರ್ಣಗೊಳ್ಳುವ ಮುನ್ನವೇ ಚುನಾವಣೆ ನಡೆಯಲಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು.
ಇದೀಗ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಈ ಕುರಿತಂತೆ ಮಹತ್ವದ ಹೇಳಿಕೆ ನೀಡಿದ್ದು, ಯಾವುದೇ ಕಾರಣಕ್ಕೂ ಅವಧಿಗೂ ಮುನ್ನ ನಾವು ಚುನಾವಣೆಗೆ ಹೋಗುವುದಿಲ್ಲ ರಾಜ್ಯ ಸರ್ಕಾರ ಐದು ವರ್ಷ ಅಧಿಕಾರಾವಧಿ ಪೂರೈಸುತ್ತದೆ ಎಂದು ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತುರ್ತಾಗಿ ಮುಖ್ಯಮಂತ್ರಿಯಾಗಬೇಕಿದೆ. ಆದರೆ ನಮ್ಮ ಪಕ್ಷದಲ್ಲಿ ಯಾರಿಗೂ ಅಂತಹ ಧಾವಂತವಿಲ್ಲ ಎಂದು ಹೇಳಿದರು.