alex Certify ಅವಮಾನಿಸುವ ಉದ್ದೇಶದಿಂದಲೇ ಜಾತಿ ಹಿಡಿದು ಬೈದರೆ ಮಾತ್ರ SC/ST ದೌರ್ಜನ್ಯ ಕಾಯ್ದೆ ಅನ್ವಯ: ಹೈಕೋರ್ಟ್ ಮಹತ್ವದ ತೀರ್ಪು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅವಮಾನಿಸುವ ಉದ್ದೇಶದಿಂದಲೇ ಜಾತಿ ಹಿಡಿದು ಬೈದರೆ ಮಾತ್ರ SC/ST ದೌರ್ಜನ್ಯ ಕಾಯ್ದೆ ಅನ್ವಯ: ಹೈಕೋರ್ಟ್ ಮಹತ್ವದ ತೀರ್ಪು

ಯಾವುದೇ ವ್ಯಕ್ತಿಯನ್ನು ಅವಮಾನಿಸುವ ಉದ್ದೇಶದಿಂದಲೇ ಜಾತಿ ನಿಂದನೆ ಮಾಡಿದರೆ ಮಾತ್ರ ಅಪರಾಧವಾಗುತ್ತದೆ ಹೊರತು ಸುಮ್ಮನೆ ಜಾತಿ ಹಿಡಿದು ಬೈದರೆ ಅದಕ್ಕೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ನಿಯಂತ್ರಣ ಕಾಯ್ದೆ ಅನ್ವಯವಾಗುವುದಿಲ್ಲ ಎಂದು ಪ್ರಕರಣವೊಂದರ ವಿಚಾರಣೆ ವೇಳೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಪ್ರಕರಣದ ವಿವರ: ಕ್ರಿಕೆಟ್ ಆಟದ ವೇಳೆ ಎರಡು ತಂಡಗಳ ನಡುವೆ ನಡೆದ ಜಗಳದಲ್ಲಿ ಶಶಿಕುಮಾರ್ ಎಂಬವರ ವಿರುದ್ಧ ದೂರು ದಾಖಲಿಸಿದ್ದ ಜಯಮ್ಮ ಎಂಬವರು, ತಮ್ಮ ಮಗನನ್ನು ಹಿಡಿದು ಹೊಡೆದಿದ್ದಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎಂದು ತಿಳಿಸಿದ್ದರು. ಈ ಹಿನ್ನಲೆಯಲ್ಲಿ ಪೊಲೀಸರು ಇತರೆ ಕಾಯ್ದೆಗಳ ಜೊತೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ನಿಯಂತ್ರಣ ಕಾಯ್ದೆ ಅನ್ವಯವೂ ಪ್ರಕರಣ ದಾಖಲಿಸಿದ್ದರು.

ಇದನ್ನು ಪ್ರಶ್ನಿಸಿ ಶಶಿಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದು, ಅವರ ಪರ ವಕೀಲರು, ಉದ್ದೇಶಪೂರ್ವಕವಾಗಿ ಜಾತಿ ನಿಂದನೆ ಮಾಡಿಲ್ಲ. ಆಟದ ವೇಳೆ ಜಗಳವಾದಾಗ ಆ ಪದ ಬಳಕೆಯಾಗಿರಬಹುದು. ಅಷ್ಟಕ್ಕೆ ಈ ಕಾಯ್ದೆ ಅಡಿ ಪ್ರಕರಣ ದಾಖಲಿಸಿರುವುದು ಸರಿಯಲ್ಲ ಎಂದು ತಮ್ಮ ವಾದ ಮಂಡಿಸಿದ್ದರು. ಅಲ್ಲದೆ ಘಟನೆ ನಡೆದ ತಕ್ಷಣ ನೀಡಿದ ದೂರಿನಲ್ಲಿ ಜಾತಿ ನಿಂದನೆ ವಿಚಾರ ಪ್ರಸ್ತಾಪ ಮಾಡದಿರುವುದನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದರು.

ಇದನ್ನು ಪರಿಗಣಿಸಿದ ನ್ಯಾಯಾಲಯ, ಎರಡು ಕಡೆಯವರು ಜಗಳ ನಡೆದಾಗ ಜಾತಿಯ ಹೆಸರನ್ನು ಬಳಸಿದ್ದಾರೆ ಎಂದು ಹೇಳಲಾಗಿದೆ. ಆದರೆ ಅವಮಾನಿಸುವ ಉದ್ದೇಶದಿಂದಲೇ ಇದನ್ನು ಬಳಕೆ ಮಾಡಿದ್ದಾರೆ ಎಂಬುದಕ್ಕೆ ಯಾವುದೇ ವಿವರಗಳಿಲ್ಲ. ಹೀಗಾಗಿ ಇದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ನಿಯಂತ್ರಣ ಕಾಯ್ದೆ ಅಡಿ ಅಪರಾಧವಾಗದು ಎಂದು ತೀರ್ಪು ನೀಡಿದೆ. ಆದರೆ ಐಪಿಸಿ ಕಲಂ ಗಳಡಿ ದಾಖಲಾಗಿದ್ದ ಇನ್ನಿತರ ಪ್ರಕರಣಗಳನ್ನು ಮುಂದುವರೆಸಲು ಅನುಮತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...