
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಅಮೂಲ್ಯ ಮನೆಯಲ್ಲಿ ಡಬಲ್ ಸಂಭ್ರಮ ಮನೆ ಮಾಡಿದೆ. ನಟಿ ಅಮೂಲ್ಯ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಅಮೂಲ್ಯ ಪತಿ ಜಗದೀಶ್ ಆರ್.ಚಂದ್ರ ಈ ಕುರಿತು ಫೇಸ್ ಬುಕ್ ನಲ್ಲಿ ಸಂತಸ ಹಂಚಿಕೊಂಡಿದ್ದು, ಅಮೂಲ್ಯ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದು, ಇಬ್ಬರೂ ಗಂಡು ಮಕ್ಕಳು. ತಾಯಿ ಹಾಗೂ ಮಕ್ಕಳು ಆರೋಗ್ಯದಿಂದ ಇದ್ದಾರೆ. ಈ ಪಯಣದಲ್ಲಿ ಜೊತೆ ನಿಂತು ಹಾರೈಸಿದ ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ.
ಚರ್ಚ್ ಒಳಗೆ ಗುಂಡಿನ ದಾಳಿ; ಸ್ವಂತ ಮಕ್ಕಳನ್ನೆ ಕೊಂದ ತಂದೆ…..!
ಇಂದು ಬೆಳಿಗ್ಗೆ 11:45ಕ್ಕೆ ಜಯನಗರದ ಕ್ಲೈಡ್ ನೈಟ್ ಆಸ್ಪತ್ರೆಯಲ್ಲಿ ಅಮೂಲ್ಯ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಅಮೂಲ್ಯ ಹಾಗೂ ಜಗದೀಶ್ ದಂಪತಿಗೆ ನಟಿಯರಾದ ರಮ್ಯಾ, ಆಶಿಕಾ ರಂಗನಾಥ್, ಅದ್ವಿತಿ ಶೆಟ್ಟಿ, ಹರ್ಷಿಕಾ ಪೂಣಚ್ಚ ಸೇರಿದಂತೆ ಸ್ಯಾಂಡಲ್ ವುಡ್ ನಟ-ನಟಿಯರು ಶುಭ ಕೋರಿದ್ದಾರೆ.
