ಅವಿಮುಕ್ತೇಶ್ವರ ಬ್ರಹ್ಮ ರಥೋತ್ಸವಕ್ಕೆ ಮುಸ್ಲಿಂ ಸದಸ್ಯ ನೇಮಕ ವಿಚಾರ; ಬಿಜೆಪಿಗೆ ಹಿಗ್ಗಾಮುಗ್ಗಾ ಜಾಡಿಸಿದ ಸಿಎಂ…!

ಹೊಸಕೋಟೆಯ ಅವಿಮುಕ್ತೇಶ್ವರ ಬ್ರಹ್ಮ ರಥೋತ್ಸವಕ್ಕೆ ಮುಸ್ಲಿಂ ವ್ಯಕ್ತಿಯನ್ನು ಸದಸ್ಯರನ್ನಾಗಿ ನೇಮಕ ಮಾಡಿದ್ದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ್ದ ರಾಜ್ಯ ಬಿಜೆಪಿ, ಈ ಮೂಲಕ ಕಾಂಗ್ರೆಸ್ ಸರ್ಕಾರ ದೇಗುಲಗಳನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲು ಹವಣಿಸುತ್ತಿದೆ ಎಂದು ಆರೋಪಿಸಿತ್ತು.

ಆದರೆ ಈ ಪೋಸ್ಟ್ ಪ್ರಕಟಗೊಂಡ ಸ್ವಲ್ಪ ಹೊತ್ತಿನಲ್ಲೇ ಸಚಿವ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲಾದವರು ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಇದೇ ರೀತಿ ಮುಸ್ಲಿಂ ಸದಸ್ಯರನ್ನು ನೇಮಕ ಮಾಡಿರುವುದನ್ನು ದಾಖಲೆ ಸಮೇತ ಬಿಚ್ಚಿಟ್ಟಿದ್ದರು. ಜೊತೆಗೆ ಬಿಜೆಪಿ ತನ್ನ ಪೋಸ್ಟ್ ಡಿಲೀಟ್ ಮಾಡಿ ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದರು.

ತನ್ನ ತಪ್ಪಿನ ಅರಿವಾದ ಬಿಜೆಪಿ ಈ ಪೋಸ್ಟ್ ಡಿಲೀಟ್ ಮಾಡಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಶಿಯಲ್ ಮೀಡಿಯಾಯದಲ್ಲಿ ಬಿಜೆಪಿಯನ್ನು ಹಿಗ್ಗಾಮುಗ್ಗಾ ಜಾಡಿಸಿದ್ದಾರೆ.

ತಾನು ಹೇಳಿದ ಸುಳ್ಳನ್ನು ಅಳಿಸಿಹಾಕುವುದೆಂದರೆ ವಾಂತಿ ಮಾಡಿ, ಅದನ್ನು ಮಾಡಿದವರೇ ತಿಂದ ಹಾಗೆ. ಸುಳ್ಳು ಹೇಳಿ ಸಿಕ್ಕಿಹಾಕಿಕೊಂಡ ರಾಜ್ಯ BJP Karnataka ನಾವು ಸತ್ಯವನ್ನು ಬಿಚ್ಚಿಟ್ಟ ಕೂಡಲೇ ಸಾಮಾಜಿಕ ಮಾಧ್ಯಮಗಳಲ್ಲಿದ್ದ ತನ್ನ ಸುಳ್ಳು ಆರೋಪದ ಹೇಳಿಕೆಯನ್ನು ಅಳಿಸಿಹಾಕಿದೆ.

ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವ ಸಮಿತಿಗೆ ಕಾಂಗ್ರೆಸ್ ಸರ್ಕಾರ ಮುಸ್ಲಿಮ್ ಸಮುದಾಯದ ವ್ಯಕ್ತಿಯನ್ನು ಸದಸ್ಯರನ್ನಾಗಿ ಮಾಡಿ ಹಿಂದೂಗಳ ಅಧಿಕಾರವನ್ನು ಕಿತ್ತುಕೊಳ‍್ಳಲು ಹೊರಟಿದೆ ಎಂಬ ಸುಳ್ಳು ಆರೋಪವನ್ನು ರಾಜ್ಯ ಬಿಜೆಪಿ ಮಾಡಿತ್ತು.
ಈ ಬ್ರಹ್ಮರಥೋತ್ಸವ ಸಮಿತಿಗೆ ಬಿಜೆಪಿ ಸರ್ಕಾರದ ಕಾಲದಲ್ಲಿಯೂ ಮುಸ್ಲಿಮ್ ಸಮುದಾಯ ವ್ಯಕ್ತಿಗಳನ್ನು ಸದಸ್ಯರನ್ನಾಗಿ ಮಾಡಲಾಗಿತ್ತು ಎಂಬ ಸತ್ಯ ಸಂಗತಿಯನ್ನು ನಾನು ದಾಖಲೆ ಸಮೇತ ಮುಂದಿಟ್ಟದ್ದು ಮಾತ್ರವಲ್ಲ, ಸಾಮಾಜಿಕ ಮಾಧ್ಯಮಗಳಲ್ಲಿನ ತನ್ನ ಹೇಳಿಕೆಯನ್ನು ಬಿಜೆಪಿ ಅಳಿಸಿಹಾಕಿ ರಾಜ್ಯದ ಜನತೆಯ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದೆ.

ಬಣ್ಣ ಬಯಲಾದ ಕೂಡಲೇ ಎಚ್ಚೆತ್ತುಗೊಂಡ ಲಜ್ಜೆಗೆಟ್ಟ ಬಿಜೆಪಿ ಸಾಮಾಜಿಕ ಮಾಧ್ಯಮಗಳಲ್ಲಿದ್ದ ತನ್ನ ಹೇಳಿಕೆಯನ್ನು ಅಳಿಸಿಹಾಕಿದೆ. ಈ ಬಗ್ಗೆ ಇನ್ನೂ ರಾಜ್ಯದ ಜನರ ಕ್ಷಮೆ ಕೇಳಿಲ್ಲ ಎಂದು ಹೇಳಿದ್ದಾರೆ.

https://twitter.com/siddaramaiah/status/1788172957745090584

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read