alex Certify ಅಶೋಕ ಸ್ತಂಭ ಅನಾವರಣ ಮಾಡುವ ಮೂಲಕ ನಿಯಮ ಉಲ್ಲಂಘಿಸಿದ್ರಾ ಪ್ರಧಾನಿ ? ಗುರುತರ ಆರೋಪ ಮಾಡಿದ ಓವೈಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಶೋಕ ಸ್ತಂಭ ಅನಾವರಣ ಮಾಡುವ ಮೂಲಕ ನಿಯಮ ಉಲ್ಲಂಘಿಸಿದ್ರಾ ಪ್ರಧಾನಿ ? ಗುರುತರ ಆರೋಪ ಮಾಡಿದ ಓವೈಸಿ

ಲೋಕಸಭೆಯ ನೂತನ ಕಟ್ಟಡದ ಮೇಲಿರುವ ಅಶೋಕ ಸ್ತಂಭವನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದ್ದಕ್ಕೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಕ್ಕು ಲೋಕಸಭೆ ಸ್ಪೀಕರ್‌ಗೆ ಸೇರಿದ್ದು ಎಂದು ಓವೈಸಿ ಟ್ವೀಟ್ ಮಾಡಿದ್ದಾರೆ.

ಸಂಸತ್ತು, ಸರ್ಕಾರ ಮತ್ತು ನ್ಯಾಯಾಂಗದ ಅಧಿಕಾರಗಳನ್ನು ಸಂವಿಧಾನದಲ್ಲಿ ಪ್ರತ್ಯೇಕವಾಗಿ ಚಿತ್ರಿಸಲಾಗಿದೆ. ಪ್ರಧಾನಿ ಮೋದಿ ಸರ್ಕಾರದ ಮುಖ್ಯಸ್ಥರಾಗಿ ಹೊಸ ಸಂಸತ್ತಿನ ಕಟ್ಟಡದ ಮೇಲೆ ರಾಷ್ಟ್ರೀಯ ಲಾಂಛನವನ್ನು ಅನಾವರಣ ಮಾಡಬಾರದು. ಇದು ಲೋಕಸಭೆಯ ಸ್ಪೀಕರ್ ಅಧಿಕಾರ ವ್ಯಾಪ್ತಿಗೆ ಬರುತ್ತದೆ. ಸ್ಪೀಕರ್‌ಗಳು ಸರ್ಕಾರಕ್ಕೆ ಅಧೀನರಲ್ಲ. ಪ್ರಧಾನಿ ಎಲ್ಲಾ ಸಾಂವಿಧಾನಿಕ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಓವೈಸಿ ಆರೋಪಿಸಿದ್ದಾರೆ.

ಹೊಸ ಸಂಸತ್ ಭವನದ ಮೇಲ್ಛಾವಣಿಯ ಮೇಲೆ ಹಾಕಲಾದ ರಾಷ್ಟ್ರೀಯ ಲಾಂಛನವನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದ್ದಾರೆ. ಈ ಲಾಂಛನವನ್ನು ಕಂಚಿನಿಂದ ತಯಾರಿಸಿದ್ದು, 9,500 ಕೆಜಿ ತೂಕವಿದೆ. 6.5 ಮೀಟರ್ ಎತ್ತರವಿದೆ. ಹೊಸ ಸಂಸತ್ತಿನ ಕಟ್ಟಡದ ಕೇಂದ್ರ ದ್ವಾರದ ಮೇಲ್ಭಾಗದಲ್ಲಿ ಇದನ್ನು ಹಾಕಲಾಗಿದೆ.

ಲಾಂಛನಕ್ಕೆ ರಕ್ಷಾಕವಚವಾಗಿ ಸುಮಾರು 6,500 ಕೆಜಿ ತೂಕದ ಉಕ್ಕಿನ ಪೋಷಕ ರಚನೆಯನ್ನು ನಿರ್ಮಿಸಲಾಗಿದೆ. ಲಾಂಛನ ಅನಾವರಣ ಮಾಡಿದ ಪ್ರಧಾನಿ ಮೋದಿ, ಹೊಸ ಸಂಸತ್ತಿನ ನಿರ್ಮಾಣದಲ್ಲಿ ತೊಡಗಿರುವ ಕಾರ್ಮಿಕರೊಂದಿಗೆ ಸಹ ಸಂವಾದ ನಡೆಸಿದರು. ಹೊಸ ಸಂಸತ್ತಿನ ಕಟ್ಟಡದ ಛಾವಣಿಯ ಮೇಲಿನ ಈ ರಾಷ್ಟ್ರೀಯ ಲಾಂಛನ ಸ್ಥಾಪನೆ ಹಿಂದೆ ಸಾಕಷ್ಟು ಪರಿಶ್ರಮವಿದೆ.

ಈ ಪರಿಕಲ್ಪನೆಯ ರೇಖಾಚಿತ್ರ, ಕ್ಲೇ ಮಾಡೆಲಿಂಗ್, ಕಂಪ್ಯೂಟರ್ ಗ್ರಾಫಿಕ್ಸ್‌ನಿಂದ ಕಂಚಿನ ಎರಕ ಹೊಯ್ಯುವುದು, ಪಾಲಿಶಿಂಗ್‌ ಹೀಗೆ ಎಂಟು ವಿಭಿನ್ನ ಹಂತಗಳಲ್ಲಿ ನಿರ್ಮಾಣವಾಗಿದೆ. ಇನ್ನು ಹೊಸ ಸಂಸತ್ ಭವನದ ಕಟ್ಟಡವು 64,500 ಚದರ ಮೀಟರ್ ವಿಸ್ತೀರ್ಣವನ್ನು ಹೊಂದಿದೆ. ಇಲ್ಲಿ ಭಾರತದ ಪ್ರಜಾಪ್ರಭುತ್ವ ಪರಂಪರೆಯನ್ನು ಪ್ರದರ್ಶಿಸಲು ಭವ್ಯವಾದ ಸಂವಿಧಾನ ಸಭಾಂಗಣವನ್ನು ನಿರ್ಮಿಸಲಾಗಿದೆ.

ಸಂಸತ್ತಿನ ಸದಸ್ಯರಿಗೆ ವಿಶ್ರಾಂತಿ ಕೋಣೆ, ಗ್ರಂಥಾಲಯ, ಬಹು ಸಮಿತಿ ಕೊಠಡಿಗಳು, ಊಟದ ಸ್ಥಳ, ವಿಶಾಲವಾದ ಪಾರ್ಕಿಂಗ್ ಸ್ಥಳವನ್ನು ಸಹ ಇದು ಹೊಂದಿದೆ. ಹೊಸ ಕಟ್ಟಡದಲ್ಲಿ, ಲೋಕಸಭೆಯ ಚೇಂಬರ್ 888 ಸದಸ್ಯರ ಆಸನ ಸಾಮರ್ಥ್ಯವನ್ನು ಹೊಂದಿರುತ್ತದೆ. ರಾಜ್ಯಸಭೆಯು ಸದಸ್ಯರಿಗೆ 384 ಸ್ಥಾನಗಳನ್ನು ಹೊಂದಿರುತ್ತದೆ. ಜಂಟಿ ಅಧಿವೇಶನಗಳಲ್ಲಿ ಲೋಕಸಭೆಯ ಚೇಂಬರ್ ನಲ್ಲಿ 1,224 ಸದಸ್ಯರಿಗೆ ಆಸನದ ವ್ಯವಸ್ಥೆ ಮಾಡಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...