![](https://kannadadunia.com/wp-content/uploads/2023/01/25fa7196-bf6a-48a7-8cfb-34bef12a02f2.jpg)
ಕಿರುತೆರೆ ನಟಿ ಉರ್ಫಿ ಜಾವೇದ್ ಕಳೆದ ಕೆಲವು ದಿನಗಳಿಂದ ದೊಡ್ಡ ಮಟ್ಟದಲ್ಲಿ ಸುದ್ದಿಯಲ್ಲಿದ್ದಾರೆ. ಅವರು ಹಾಕುವ ಉಡುಪು ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗುತ್ತಿರುವುದರ ಜೊತೆಗೆ ಸಂಪ್ರದಾಯವಾದಿಗಳ ಕೆಂಗಣ್ಣಿಗೂ ಗುರಿಯಾಗಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಅಪಾರ ಸಂಖ್ಯೆಯ ಫಾಲೋವರ್ಸ್ ಗಳನ್ನು ಹೊಂದಿರುವ ಉರ್ಫಿ ಜಾವೇದ್ ಅರೆಬರೆ ಉಡುಗೆ ತೊಟ್ಟು ತಮ್ಮ ವಿಡಿಯೋ ಹಾಗೂ ಫೋಟೋಗಳನ್ನು ಪೋಸ್ಟ್ ಮಾಡುತ್ತಿರುತ್ತಾರೆ. ಅಷ್ಟೇ ಅಲ್ಲ ಸಾರ್ವಜನಿಕ ಸ್ಥಳಗಳಲ್ಲೂ ಸಹ ಇದೇ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಬಿಜೆಪಿ ನಾಯಕಿ ಚಿತ್ರಾ ವಾಘ್, ಉರ್ಫಿ ಜಾವೇದ್ ವಿರುದ್ಧ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಸಾರ್ವಜನಿಕ ಸ್ಥಳಗಳಲ್ಲಿ ಉರ್ಫಿ ಜಾವೇದ್ ಅಸಭ್ಯ ಉಡುಪಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದರು.
ಹೀಗಾಗಿ ಪೊಲೀಸರು ಉರ್ಫಿ ಜಾವೇದ್ ಅವರನ್ನು ಠಾಣೆಗೆ ಕರೆಯಿಸಿಕೊಂಡು ಎಚ್ಚರಿಕೆ ನೀಡಿ ಕಳುಹಿಸಿದ್ದರು. ಇದಾದ ಮರುದಿನವೇ ಉರ್ಫಿ ಮತ್ತೊಂದು ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾಳೆ. ಟಾಪ್ ಲೆಸ್ ಆಗಿರುವ ತನ್ನ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕಿದ್ದು, ಇದು ಈಗ ವೈರಲ್ ಆಗಿದೆ.