ಅಸಹಜ ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಕಾರಣಕ್ಕೆ ಅಪ್ರಾಪ್ತ ಬಾಲಕನನ್ನು 20 ವರ್ಷದ ಯುವಕ ಚಾಕುವಿನಿಂದ ಇರಿದು ಕೊಲೆ ಮಾಡಿದ ಬೆಚ್ಚಿ ಬೀಳಿಸುವ ಘಟನೆಯೊಂದು ಛತ್ತೀಸಗಢದ ಬೆಮೆತಾರಾ ಜಿಲ್ಲೆಯಲ್ಲಿ ನಡೆದಿದೆ.
ಆರೋಪಿಯನ್ನು ಪಂಕಜ್ ವಿಶ್ವಕರ್ಮ ಎಂದು ಗುರುತಿಸಲಾಗಿದೆ. ಸೋಮವಾರದಂದು ಬಾಲಕನನ್ನು ಬಿಜಭಟ ಮುರುಮ್ ಗಣಿ ಬಳಿಯ ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದ ಆರೋಪಿಯು ಆತನಿಗೆ ಚಾಕು ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಅಪರಾಧ ಎಸಗಿದ ಬಳಿಕ ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದ ಎಂದು ಬೆಮತಾರಾ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಪ್ರೇಮ್ ಪ್ರಕಾಶ್ ಅವಧಿಯಾ ತಿಳಿಸಿದ್ದಾರೆ.
ಕೊಲೆಯಾದ ಬಾಲಕನ ಪೋಷಕರು ಪುತ್ರ ಕಾಣೆಯಾಗಿದ್ದಾನೆ ಎಂದು ದೂರು ನೀಡಿದ ಬಳಿಕ ಪೊಲೀಸರು ಪಂಕಜ್ ವಿಶ್ವಕರ್ಮನನ್ನು ಪತ್ತೆ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.