alex Certify ಅಸ್ತಿತ್ವಕ್ಕೆ ಬಂದ 10 ವರ್ಷಗಳಲ್ಲೇ ಮಹತ್ತರ ಸಾಧನೆ ಮಾಡಿದ ‘ಆಮ್ ಆದ್ಮಿ ಪಾರ್ಟಿ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಸ್ತಿತ್ವಕ್ಕೆ ಬಂದ 10 ವರ್ಷಗಳಲ್ಲೇ ಮಹತ್ತರ ಸಾಧನೆ ಮಾಡಿದ ‘ಆಮ್ ಆದ್ಮಿ ಪಾರ್ಟಿ’

ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶ ಗುರುವಾರದಂದು ಹೊರ ಬಿದ್ದಿದ್ದು, ನಿರೀಕ್ಷೆಯಂತೆ ಗುಜರಾತಿನಲ್ಲಿ ಮತ್ತೆ ಬಿಜೆಪಿ ಹಾಗೂ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಹಿಡಿದಿದೆ. ಗುಜರಾತಿನಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಹೇಳುತ್ತಿದ್ದ ಆಮ್ ಆದ್ಮಿ ಪಾರ್ಟಿ ಕೇವಲ ಐದು ಸ್ಥಾನಗಳಲ್ಲಿ ಗೆದ್ದಿದ್ದು, ಇದರ ಮಧ್ಯೆಯೂ ಮಹತ್ತರ ಸಾಧನೆಯೊಂದನ್ನು ಮಾಡಿದೆ.

ಹೌದು, ಆಮ್ ಆದ್ಮಿ ಪಾರ್ಟಿ ಅಸ್ತಿತ್ವಕ್ಕೆ ಬಂದ 10 ವರ್ಷಗಳಲ್ಲಿ ಈಗ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದುಕೊಳ್ಳಲಿದ್ದು, ಸೋಲಿನ ನಡುವೆಯೂ ಅರವಿಂದ್ ಕೇಜ್ರಿವಾಲ್ ಅವರ ಪಕ್ಷಕ್ಕೆ ಖುಷಿ ಸಿಕ್ಕಿದೆ. ಆಮ್ ಆದ್ಮಿ ಪಾರ್ಟಿ ಈಗಾಗಲೇ ದೆಹಲಿ ಹಾಗೂ ಪಂಜಾಬ್ ನಲ್ಲಿ ಸ್ವಂತ ಬಲದ ಮೇಲೆ ಅಧಿಕಾರ ನಡೆಸುತ್ತಿದ್ದು, ಗೋವಾದಲ್ಲಿ ಇಬ್ಬರು ಶಾಸಕರನ್ನು ಹೊಂದಿದೆ.

ಇದೀಗ ಗುಜರಾತಿನಲ್ಲಿ ಐವರು ಶಾಸಕರಾಗಿ ಆಯ್ಕೆಯಾಗಿದ್ದು, ಯಾವುದೇ ಒಂದು ಪಕ್ಷ ರಾಷ್ಟ್ರೀಯ ಸ್ಥಾನಮಾನ ಪಡೆಯಬೇಕಾದರೆ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ತಲಾ ಶೇಕಡ 6ಕ್ಕಿಂತ ಅಧಿಕ ಮತ ಅಥವಾ ತಲಾ ಎರಡು ಶಾಸಕರನ್ನು ಹೊಂದಿರಬೇಕಾಗುತ್ತದೆ. ಇದೀಗ ಗುಜರಾತ್ ಗೆಲುವಿನೊಂದಿಗೆ ಈ ಮಾನದಂಡವನ್ನು ಆಮ್ ಆದ್ಮಿ ಪಕ್ಷ ಈಗ ಪೂರೈಸಿರುವ ಕಾರಣ ಇದೀಗ ಅದಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಸಿಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...