alex Certify ಆಂಗ್ಲರನ್ನು ಬಗ್ಗು ಬಡಿದು ಸರಣಿ ಕೈ ವಶ ಮಾಡಿಕೊಂಡ ಆಸ್ಟ್ರೇಲಿಯಾ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಂಗ್ಲರನ್ನು ಬಗ್ಗು ಬಡಿದು ಸರಣಿ ಕೈ ವಶ ಮಾಡಿಕೊಂಡ ಆಸ್ಟ್ರೇಲಿಯಾ!

ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಇನ್ನೂ ಎರಡು ಪಂದ್ಯಗಳು ಬಾಕಿ ಇರುವಾಗಲೇ ಆಸ್ಟ್ರೇಲಿಯಾ ಪ್ರಶಸ್ತಿಗೆ ಮುತ್ತಿಕ್ಕಿದೆ.
ಇಂಗ್ಲೆಂಡ್ ತಂಡವು ಮೊದಲೆರಡು ಪಂದ್ಯಗಳಲ್ಲಿಯೂ ಕೆಟ್ಟ ಪ್ರದರ್ಶನ ತೋರಿಸಿತ್ತು. ಮೂರನೇ ಪಂದ್ಯದಲ್ಲಿಯೂ ಅದನ್ನು ಮುಂದುವರೆಸಿತು. ಹೀಗಾಗಿ ಅಭಿಮಾನಿಗಳು ಹಾಗೂ ಕ್ರಿಕೆಟ್ ದಿಗ್ಗಜರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಕಳೆದ ಎರಡು ಟೆಸ್ಟ್ ಗಳಲ್ಲಿ ಸೋಲು ಕಂಡಿದ್ದ ಇಂಗ್ಲೆಂಡ್ ಮೂರನೇ ಪಂದ್ಯದಲ್ಲಿಯೂ ಸೋಲು ಕಂಡಿದ್ದು, ಆಸ್ಟ್ರೇಲಿಯಾ ಸರಣಿ ವಶ ಮಾಡಿಕೊಂಡಿದೆ. 5 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ 3-0 ಅಂತರದ ಮುನ್ನಡೆ ಸಾಧಿಸಿದೆ.

ಸಿದ್ಧರಾಮಯ್ಯ ಅಧಿಕಾರಕ್ಕೆ ಬರಲ್ಲ, ಅವರು ಹೇಳಿದ್ದು ಆಗಲ್ಲ- ಸಚಿವ ಸುಧಾಕರ್

ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಇನ್ನಿಂಗ್ಸ್ ಹಾಗೂ 14 ರನ್ ಗಳ ಭರ್ಜರಿ ಜಯ ಸಾಧಿಸಿದೆ. ಅಲ್ಲದೇ, ಈ ಪಂದ್ಯದಲ್ಲಿ ಆಸ್ಟ್ರೇಲಿಯಾದ ವೇಗಿ ಸ್ಕಾಟ್ ಬೋಲ್ಯಾಂಡ್ ತಾನಾಡಿದ ಚೊಚ್ಚಲ ಪಂದ್ಯದಲ್ಲಿಯೇ ದಾಖಲೆಯ 6 ವಿಕೆಟ್ ಗಳನ್ನು ಕಿತ್ತು ಸರಣಿ ಜಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಅವರು ಎಸೆದ 19 ಎಸೆತಗಳಲ್ಲಿಯೇ ಇಂಗ್ಲೆಂಡ್ ನ ಐವರು ಪ್ರಮುಖ ಬ್ಯಾಟ್ಸಮನ್ ಗಳು ಫೆವಲೀಯನ್ ಸೇರಿದ್ದಾರೆ. ಈ ಮೂಲಕ ಟೆಸ್ಟ್ ಇತಿಹಾಸದಲ್ಲಿಯೇ ವೇಗವಾಗಿ 5 ವಿಕೆಟ್ ಗಳನ್ನು ಕಿತ್ತ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ.
ಇಂಗ್ಲೆಂಡ್ ಮೂರನೇ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ 185 ರನ್ ಗಳಿಸಿತ್ತು. ಆಗ ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ಆಸ್ಟ್ರೇಲಿಯಾ 267 ರನ್ ಗಳನ್ನು ಗಳಿಸಿತ್ತು. ನಂತರ ಎರಡನೇ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಕೇವಲ 68 ರನ್‌ ಗಳಿಗೆ ಆಲ್ ಔಟ್ ಆಯಿತು. ಆಸ್ಟ್ರೇಲಿಯಾ ಪರ ಸ್ಕಾಟ್ ಬೊಲ್ಯಾಂಡ್ 7 ರನ್ ನೀಡಿ 6 ವಿಕೆಟ್ ಕಿತ್ತು ಮಿಂಚಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...