ಅಮರಾವತಿ: ಅವ್ಯವಹಾರಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ಬಂಧನದ ಭೀತಿ ಎದುರಾಗಿದೆ.
ಅಮರಾವತಿಯ ಒಳವರ್ತುಲ ರಸ್ತೆಯ ಜೋಡಣೆಯಲ್ಲಿನ ಅವ್ಯವಹಾರಕ್ಕೆ ಸಂಬಂಧ ಪಟ್ಟಂತೆ ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಚಂದ್ರ ಬಾಬು ನಾಯ್ಡು ವಿರುದ್ಧ ಪ್ರಕರಣ ದಾಖಲಾಗಿದೆ.
ಸಂಸದೆ ಸಾಧ್ವಿ ಪ್ರಗ್ಯಾ ಸಿಂಗ್ ಅವರ ಮೊಬೈಲ್ ಗೆ ಆಕ್ಷೇಪಾರ್ಹ ಸಂದೇಶ; ತನಿಖೆಗೆ ಮುಂದಾದ ಪೊಲೀಸ್
ದೂರಿನ ಆಧಾರದ ಮೇಲೆ ಎಪಿ ಸಿಐಡಿ ಸೋಮವಾರ ನಾಯ್ಡು ವಿರುದ್ಧ ಪ್ರಕರಣ ದಾಖಲಿಸಿದೆ. ಇದೇ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಡಿಪಿಯ ಮಾಜಿ ಸಚಿವ ಪಿ ನಾರಾಯಣ ಅವರನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ. ನಾರಾಯಣ ಅವರು ನಾರಾಯಣ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾಗಿದ್ದು, ಈ ಪ್ರಕರಣ ಸಂಬಂಧ ಕಳೆದ ವಾರ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದರು.