‘ನಾನು ಮತ್ತು ಗುಂಡ’ ಚಿತ್ರದ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದ ಕಾಮಿಡಿ ಕಿಲಾಡಿಗಳು ಖ್ಯಾತಿಯ ಶಿವರಾಜ್ ಕೆ.ಆರ್. ಪೇಟೆ, ಇದೀಗ ‘ಧಮಾಕ’ ಎಂಬ ಮತ್ತೊಂದು ಹಾಸ್ಯಭರಿತ ಚಿತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ.
ಈಗಾಗಲೇ ಬಹುತೇಕ ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ ಟ್ರೈಲರ್ ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿದೆ. ನಾಳೆ ಸಂಜೆ 6:06ಕ್ಕೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ನಲ್ಲಿ ಈ ಸಿನಿಮಾ ಟ್ರೈಲರ್ ರಿಲೀಸ್ ಆಗಲಿದೆ.
ಲಕ್ಷ್ಮಿ ರಮೇಶ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಶಿವರಾಜ್ ಕೆ.ಆರ್. ಪೇಟೆ, ಸಿದ್ದ ಮೂಲಿಮನಿ, ನಯನ ಹಾಗೂ ಪ್ರಿಯಾ ಆಚಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಎಸ್ ಆರ್ ಮೀಡಿಯಾ ಪ್ರೊಡಕ್ಷನ್ ಬ್ಯಾನರ್ ನಡಿ ಸುನಿಲ್ ಹಾಗೂ ಅನ್ನಪೂರ್ಣ ಬಿ ಪಾಟೀಲ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ವಿಕಾಸ್ ವಸಿಷ್ಠ ಸಂಗೀತ ನೀಡಿದ್ದಾರೆ.