alex Certify ಆಗಸ್ಟ್ 9ಕ್ಕೆ ‘ಖುಷಿ’ ಚಿತ್ರದ ಟ್ರೈಲರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಗಸ್ಟ್ 9ಕ್ಕೆ ‘ಖುಷಿ’ ಚಿತ್ರದ ಟ್ರೈಲರ್ ರಿಲೀಸ್

ವಿಜಯ್ ದೇವರಕೊಂಡ ಹಾಗೂ ಸಮಂತಾ ಅಭಿನಯದ ‘ಖುಷಿ’ ಚಿತ್ರದ ಟ್ರೈಲರ್ ಆಗಸ್ಟ್ 9ಕ್ಕೆ ಮೈತ್ರಿ ಮೂವೀ ಮೇಕರ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗುತ್ತಿದೆ.

ಈ ವಿಚಾರವನ್ನು ವಿಜಯ್ ದೇವರಕೊಂಡ ತಮ್ಮ instagram ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಕಥಾಂದರ ಹೊಂದಿರುವ ಈ ಚಿತ್ರವನ್ನು ಶಿವನಿರ್ವಾಣ ನಿರ್ದೇಶಿಸಿದ್ದು, ಮೈತ್ರಿ ಮೂವೀ ಮೇಕರ್ಸ್ ಬ್ಯಾನರ್ ನಡಿ ನವೀನ್ ಹಾಗೂ ರವಿ ಶಂಕರ್ ನಿರ್ಮಾಣ ಮಾಡಿದ್ದಾರೆ.

ಸೆಪ್ಟೆಂಬರ್ 1ರಂದು ಸಿನಿಮಾ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಈಗಾಗಲೇ ಘೋಷಣೆ ಮಾಡಿದ್ದು, ಡಬ್ಬಿಂಗ್ ಕಾರ್ಯದಲ್ಲಿ ನಿರತರಾಗಿದ್ದಾರೆ. ಈ ಚಿತ್ರದಲ್ಲಿ ವೆನಿಲ್ಲಾ ಕಿಶೋರ್, ಮುರುಳಿ ಶರ್ಮ, ಲಕ್ಷ್ಮಿ, ರೋಹಿಣಿ, ಜಯರಾಮ್, ರಾಹುಲ್ ರಾಮಕೃಷ್ಣ, ಶ್ರೀಕಾಂತ್ ಅಯ್ಯಂಗಾರ್‌ ಸೇರಿದಂತೆ ಮುಂತಾದ ಕಲಾವಿದರು ಅಭಿನಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...