ರಾಜ್ಯದಾದ್ಯಂತ ಕಳೆದ ಕೆಲವು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಮಳೆ ಇನ್ನೂ ಕೆಲವು ದಿನಗಳ ಕಾಲ ಮುಂದುವರಿಯಲಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಇದರ ಮಧ್ಯೆ ಆಗುಂಬೆ ಘಾಟಿ ಮೂಲಕ ಸಂಚರಿಸುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.
ಆಗುಂಬೆ ಘಾಟಿಯ ಹನ್ನೊಂದನೇ ತಿರುವಿನಲ್ಲಿ ಹೊಸದಾಗಿ ಭೂಕುಸಿತ ಸಂಭವಿಸಿರುವ ಹಿನ್ನೆಲೆಯಲ್ಲಿ ಹಾಗೂ ವ್ಯಾಪಕ ಮಳೆಯ ಕಾರಣಕ್ಕೆ ಉಡುಪಿ – ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ 169 ಎ ನಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ಈ ಮೊದಲೇ ಇಲ್ಲಿ ಭಾರಿ ವಾಹನಗಳ ಸಂಚಾರವನ್ನು ಆಗಸ್ಟ್ 31 ರವರೆಗೆ ನಿಷೇಧಿಸಲಾಗಿದ್ದು, ಅದನ್ನು ಈಗ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ಅಲ್ಲಿಯವರೆಗೆ ಕೇವಲ ಲಘು ವಾಹನ ಮತ್ತು ಮಿನಿ ಬಸ್ ಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಲಾಗಿದೆ.