![](https://kannadadunia.com/wp-content/uploads/2020/06/Coronavirus-in-India-1.jpg)
ನವದೆಹಲಿ: ದೇಶದ ಜನರಿಗೆ ಕೊಂಚ ನಿಟ್ಟುಸಿರು ಬಿಡುವ ಸುದ್ದಿ, ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 2,55,874 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದಿನದ ಪಾಸಿಟಿವಿಟಿ ರೇಟ್ ಶೇ.15.52ಕ್ಕೆ ಏರಿಕೆಯಾಗಿದೆ.
ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 614 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 489848 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 2236842 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 267753 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 37071898 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ 62,29,956 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,62,92,09,308 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 16,49,108ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.