ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವನೊಬ್ಬ ಗಂಭೀರ ಸ್ಥಿತಿಯಲ್ಲಿದ್ದಾಗ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ವಲ್ಪ ಚೇತರಿಸಿಕೊಂಡ ಬಳಿಕ ಆತ ಮತ್ತೆ ಸಾಯಲು ಯತ್ನಿಸಿದ್ದಾನೆ.
ಇಂತಹದೊಂದು ಘಟನೆ ಕೇರಳದಲ್ಲಿ ನಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಮಿತ್ತೂರು ನಿವಾಸಿ ಮೊಯ್ದೀನ್ ಇರ್ಷಾದ್ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದರೂ ಈಗ ಬದುಕುಳಿದಿದ್ದಾನೆ.
ಈತ ಫೆಬ್ರವರಿ 16ರಂದು ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದಾಗ ಕೇರಳದ ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈತ ಸ್ವಲ್ಪ ಚೇತರಿಸಿಕೊಂಡಿದ್ದು ಗುರುವಾರದಂದು ಎಂಟನೇ ಮಹಡಿಯಿಂದ ಹಾರಿ ಮತ್ತೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇದರಿಂದಾಗಿ ಕೈ ಕಾಲು ಮುರಿದುಕೊಂಡು ಈಗ ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.