ಒಂದು ಕಾಲದಲ್ಲಿ ರಾಜ್ಯ ರಾಜಕಾರಣದಲ್ಲಿ ತಮ್ಮ ಛಾಪು ಮೂಡಿಸಿದ್ದ ಗಾಲಿ ಜನಾರ್ದನ ರೆಡ್ಡಿ, ನಂತರ ನಡೆದ ಬೆಳವಣಿಗೆಗಳ ಬಳಿಕ ನೇಪಥ್ಯಕ್ಕೆ ಸರಿದಿದ್ದರು. ಆದರೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮದೇ ಸ್ವಂತ ಪಕ್ಷ ಕಟ್ಟಿಕೊಂಡು ಗಂಗಾವತಿ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದ ಅವರು ಜಯ ಸಾಧಿಸಿದ್ದಾರೆ.
ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಅವರು ಭಾನುವಾರದಂದು ಕೊಪ್ಪಳ ಜಿಲ್ಲೆ, ಗಂಗಾವತಿಯ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ್ದಾರೆ.
ರಾಜ್ಯ ನಾಯಕರು, ಆತ್ಮೀಯರೇ ನನ್ನನ್ನು ತುಳಿಯಲು ನೋಡಿದರು. ಆದರೆ ಗಂಗಾವತಿ ಜನತೆ ನನ್ನ ಮೇಲೆ ವಿಶ್ವಾಸವಿಟ್ಟು ಗೆಲ್ಲಿಸಿಕೊಟ್ಟಿದ್ದಾರೆ. ಅವರ ಈ ಋಣವನ್ನು ನನ್ನ ಜನ್ಮ ಇರುವವರೆಗೂ ಮರೆಯುವುದಿಲ್ಲ ಎಂದ ಜನಾರ್ದನ ರೆಡ್ಡಿ, ಚುನಾವಣೆ ಸಂದರ್ಭದಲ್ಲಿ ನಾನು ಕೊಟ್ಟ ಭರವಸೆಗಳನ್ನು ಈಡೇರಿಸುತ್ತೇನೆ ಎಂದು ಹೇಳಿದರು.