ಆಧಾರ್ ಮತ್ತು ಪಾನ್ ಜೋಡಣೆ ಮಾಡಲು ಈ ಹಿಂದೆ ಹಲವು ಗಡುವುಗಳನ್ನು ನೀಡಲಾಗಿದ್ದರೂ ಇದೀಗ ಮಾರ್ಚ್ 31 ಅಂತಿಮ ದಿನವೆಂದು ನಿಗದಿಪಡಿಸಲಾಗಿದೆ. ಈ ಬಾರಿ ಯಾವುದೇ ಕಾರಣಕ್ಕೂ ದಿನಾಂಕ ವಿಸ್ತರಣೆಯಾಗುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಮೂಲಗಳು ಸ್ಪಷ್ಟವಾಗಿ ತಿಳಿಸಿವೆ.
ಮಾರ್ಚ್ 31ರೊಳಗೆ ಆಧಾರ್ ಜೊತೆ ಪಾನ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, ಇದಕ್ಕಾಗಿ ಒಂದು ಸಾವಿರ ರೂಪಾಯಿ ಶುಲ್ಕವನ್ನು ವಿಧಿಸಲಾಗುತ್ತದೆ. ಒಂದೊಮ್ಮೆ ಈ ಅವಧಿಯೊಳಗೆ ಲಿಂಕ್ ಮಾಡದಿದ್ದರೆ ಏಪ್ರಿಲ್ 1ರಿಂದ ಪಾನ್ ಕಾರ್ಡ್ ನಿಷ್ಕ್ರಿಯಗೊಳ್ಳಲಿದೆ ಎಂದು ಆದಾಯ ತೆರಿಗೆ ಇಲಾಖೆ ಎಚ್ಚರಿಸಿದೆ.
ಪಾನ್ ಕಾರ್ಡ್ ನಿಷ್ಕ್ರಿಯಗೊಂಡರೆ ಬ್ಯಾಂಕ್ ವಹಿವಾಟು ಸೇರಿದಂತೆ ಹಲವು ಕಾರ್ಯಗಳಿಗೆ ಭಾರಿ ತೊಂದರೆಯಾಗಲಿದ್ದು, ಹೀಗಾಗಿ ಈವರೆಗೆ ಆಧಾರ್ ಜೊತೆ ಪಾನ್ ಕಾರ್ಡ್ ಜೋಡಣೆ ಮಾಡದಿರುವವರು ಇನ್ನು ಒಂದು ವಾರದೊಳಗೆ ಅಂದರೆ ಮಾರ್ಚ್ 31ರೊಳಗೆ ಈ ಕಾರ್ಯ ಮಾಡಬೇಕಿದೆ.