ಬೆಂಗಳೂರು: ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲಾಗಿದೆ. ಆಪರೇಷನ್ ಗಂಗಾ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿದ ಹಿನ್ನೆಲೆಯಲ್ಲಿ ಉಕ್ರೇನ್ ನಲ್ಲಿ ವೈದ್ಯಕೀಯ ವಿದ್ಯಾಭ್ಯಾಸಕ್ಕೆ ತೆರಳಿದ್ದ ಭಾರತೀಯ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗಿದ್ದರು. ಭಾರತೀಯರನ್ನು ತಾಯ್ನಾಡಿಗೆ ಕರೆತರಲು ಆಪರೇಶನ್ ಗಂಗಾ ಕಾರ್ಯಾಚರಣೆ ನಡೆಸಲಾಗಿತ್ತು. ಇದೀಗ ಆಪರೇಷನ್ ಗಂಗಾ ಯಶಸ್ವಿಯಾಗಿದೆ ಎಂದರು.
ಸ್ಟ್ರೀಟ್ ಬಾಯ್‌ಗೆ ಕೈತುಂಬ ಹಣ ನೀಡಿದ ಫಕಾಥಿ, ಗಳಗಳನೆ ಅತ್ತ ಬಾಲಕ
ಎಲ್ಲಾ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲಾಗಿದೆ. ಪ್ರಧಾನಿ ಮೋದಿ ನಾಲ್ಕು ಜನ ಸಚಿವರನ್ನು ಕಳುಹಿಸಿಕೊಟ್ಟು ಸುರಕ್ಷಿತವಾಗಿ ವಿದ್ಯಾರ್ಥಿಗಳನ್ನು ಕರೆದುಕೊಂಡು ಬಂದಿದ್ದಾರೆ ಎಂದು ಹೇಳಿದರು.