ಬೆಂಗಳೂರು: ಪೊಲೀಸ್ ವಶದಲ್ಲಿದ್ದ ಆಫ್ರಿಕನ್ ಪ್ರಜೆ ಸಾವು ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ಪ್ರಕರಣದಲ್ಲಿ ವಶಕ್ಕೆ ಪಡೆಯಲಾಗಿದ್ದ ಆಫ್ರಿಕನ್ ಪ್ರಜೆ ಅನಾರೋಗ್ಯದಿಂದ ಸಾವನ್ನಪ್ಪಿದ್ದು, ಆಫ್ರಿಕನ್ ಪ್ರಜೆಗಳು ಜೆ.ಸಿ. ನಗರ ಠಾಣೆ ಎದುರು ಪ್ರತಿಭಟನೆ ನಡೆಸಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದರು. ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು ಲಾಠಿ ಚಾರ್ಜ್ ನಡೆಸಿ ಹಲವರನ್ನು ಬಂಧಿಸಿದ್ದು, ಇಡೀ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.
BIG BREAKING NEWS: ಪರಿಶಿಷ್ಟ ಜಾತಿ-ಪಂಗಡದ ರೈತರು ಸೇರಿ ಎಲ್ಲ ರೈತರ ಸಾಲ ಮನ್ನಾ ಇಲ್ಲ; ಕೇಂದ್ರ ಸರ್ಕಾರದ ಮಾಹಿತಿ
ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಓರ್ವ ಆಫ್ರಿಕನ್ ಪ್ರಜೆಯನ್ನು ವಶಕ್ಕೆ ಪಡೆಯಲಾಗಿತ್ತು, ಇನ್ನೋರ್ವ ಪರಾರಿಯಾಗಿದ್ದ. ಎದೆನೋವು ಹಿನ್ನೆಲೆಯಲ್ಲಿ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದ. ರಾಷ್ಟ್ರೀಯ ಮಾನವ ಹಕ್ಕು ಆಯೋಗ ನಿಯಮದ ಪ್ರಕಾರ ಇಬ್ಬರು ವೈದ್ಯರು ಹಾಗೂ ಓರ್ವ ಜಡ್ಜ್ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುವುದು. 2017ರಲ್ಲಿಯೇ ಆತನ ವೀಸಾ ಅವಧಿ ಮುಗಿದಿತ್ತು ಎಂದು ಮಾಹಿತಿ ನೀಡಿದ್ದಾರೆ.