ಆಭರಣ ಪ್ರಿಯರಿಗೆ ಶಾಕಿಂಗ್ ಸುದ್ದಿಯೊಂದು ಇಲ್ಲಿದೆ. ಗುರುವಾರದಂದು 10 ಗ್ರಾಂ ಚಿನ್ನ 60,370 ರೂಪಾಯಿಗಳಿಗೆ ಮಾರಾಟವಾಗಿದ್ದು, ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಹೆಚ್ಚಳವಾಗಲಿದೆ ಎಂದು ಹೇಳಲಾಗಿದೆ.
ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಹೂಡಿಕೆದಾರರು ಚಿನ್ನದ ಮೇಲೆ ಹೂಡಿಕೆ ಮಾಡುತ್ತಿರುವುದು, ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಕಂಡಿರುವುದು ಸೇರಿದಂತೆ ಮೊದಲಾದ ಕಾರಣಗಳಿಂದ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಹೊಸ ವರ್ಷದಿಂದಲೇ ಚಿನ್ನದ ಬೆಲೆ ಏರು ಗತಿಯಲ್ಲಿದ್ದು, ಜನವರಿ 2ರಂದು 56,750 ರೂಪಾಯಿಗಳಿಗೆ ಮಾರಾಟವಾಗಿದ್ದ ಹತ್ತು ಗ್ರಾಂ ಚಿನ್ನ ಫೆಬ್ರವರಿ 2 ರ ವೇಳೆಗೆ 60,370 ರೂಪಾಯಿ ತಲುಪಿದೆ. ಕೇವಲ ಒಂದು ವರ್ಷದ ಅವಧಿಯಲ್ಲಿ 10 ಗ್ರಾಂ ಚಿನ್ನದ ಬೆಲೆ ಬರೋಬ್ಬರಿ 10,830 ರೂಪಾಯಿಗಳಷ್ಟು ಏರಿಕೆಯಾಗಿದೆ.