alex Certify ಆಯುಧ ಹಿಡಿದು ಹಣ ದೋಚಲು ಹೊಂಚು ಹಾಕುತ್ತಿದ್ದ ಆರೋಪಿಗಳು ‘ಅಂದರ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಯುಧ ಹಿಡಿದು ಹಣ ದೋಚಲು ಹೊಂಚು ಹಾಕುತ್ತಿದ್ದ ಆರೋಪಿಗಳು ‘ಅಂದರ್’

ಮಾರಕಾಸ್ತ್ರಗಳನ್ನು ಹಿಡಿದು ಸಾರ್ವಜನಿಕರಿಂದ ಹಣ ದೋಚಲು ಹೊಂಚು ಹಾಕುತ್ತಿದ್ದ ಮೂವರು ಆರೋಪಿಗಳನ್ನು ಶಿವಮೊಗ್ಗ ಕೋಟೆ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ನವೆಂಬರ್ 30ರಂದು ರಾತ್ರಿ ಇವರುಗಳು ವಿದ್ಯಾನಗರ ಕಡೆಯಿಂದ ಮತ್ತೂರು ಕಡೆಗೆ ಹೋಗುವ ರಸ್ತೆಯ ಬಳಿ ಮಾರಕಾಸ್ತ್ರ ಹಿಡಿದು ಸಾರ್ವಜನಿಕರಿಂದ ಚಿನ್ನಾಭರಣ ಮತ್ತು ಹಣ ಕಿತ್ತುಕೊಳ್ಳಲು ಹೊಂಚು ಹಾಕಿದ್ದರು.

ಇದರ ಮಾಹಿತಿ ಪಡೆದ ಕೋಟೆ ಪೊಲೀಸ್ ಠಾಣೆ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ತೆರಳಿ, ಆರೋಪಿಗಳಾದ ಶ್ರೀನಿವಾಸ ಅಲಿಯಾಸ್ ತೊಟ್ಟಿ ಸೀನ, ಸುದೀಪ್, ಯತೀಶ್ ಅವರುಗಳನ್ನು ವಶಕ್ಕೆ ಪಡೆದು ಇನ್ನುಳಿದ ಇಬ್ಬರು ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...