ಬಿಜ್ನೋರ್: ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ರಾಜ್ಯದಲ್ಲಿ ಗೂಂಡಾಗಳು ಪೊಲೀಸರಿಗೆ ಬಹಿರಂಗವಾಗಿ ಸವಾಲು ಹಾಕುತ್ತಿದ್ದಾರೆ. ಇದೀಗ ಆಘಾತಕಾರಿ ವಿಡಿಯೋ ವೈರಲ್ ಆಗಿದ್ದು, ಪೊಲೀಸರಿಗೆ ರಕ್ಷಣೆ ನೀಡುವವರು ಯಾರು ಎಂಬ ಪ್ರಶ್ನೆಯೆದ್ದಿದೆ
ಹೌದು, ಗೂಂಡಾಗಳು ಪೊಲೀಸ್ ಮೇಲೆ ಥಳಿಸಿದ್ದಲ್ಲದೆ ಅವರ ಐಎನ್‌ಎಸ್‌ಎಎಸ್ ರೈಫಲ್‌ನೊಂದಿಗೆ ಪರಾರಿಯಾಗಿದ್ದಾರೆ. ಮಂಗಳವಾರ ರಾತ್ರಿ ಅಫ್ಜಲಗಢ ಪೊಲೀಸ್ ಠಾಣೆ ವ್ಯಾಪ್ತಿಯ ಭೂತಪುರಿ ತಿರಹಾದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಲಲಿತ್ ಎಂಬ ಪೊಲೀಸ್ ಪೇದೆ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ವಿಡಿಯೋ ವೈರಲ್ ಆಗಿದೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಆರಂಭಿಸಿದ್ದಾರೆ. ಇದುವರೆಗೆ ಆರೋಪಿಗಳನ್ನು ಗುರುತಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ.
ಏನಿದು ಘಟನೆ..?
ಮಂಗಳವಾರ ರಾತ್ರಿ ಕಬ್ಬಿನ ತ್ಯಾಜ್ಯವನ್ನು ಸಾಗಿಸುತ್ತಿದ್ದ ಟ್ರಕ್‌ನಲ್ಲಿ ತ್ಯಾಜ್ಯ ಸುರಿಯಲಾಗಿದೆ. ಈ ಜೆಸಿಬಿ ಮುಖಾಂತರ ತ್ಯಾಜ್ಯ ತೆಗೆಯಲು ಮುಂದಾಗಿದ್ದಾರೆ. ಈ ನಡುವೆ ಇಬ್ಬರು ವ್ಯಕ್ತಿಗಳು ಬಂದು ತ್ಯಾಜ್ಯ ಹಾಕಿದ್ದಕ್ಕೆ ಲಾರಿ ಚಾಲಕನ ಮೇಲೆ ದೌರ್ಜನ್ಯ ಎಸಗಿದ್ದಾರೆ.
ಇದನ್ನು ಗಮನಿಸಿದ ಪೊಲೀಸ್ ಮತ್ತು ಒಬ್ಬ ಹೋಂಗಾರ್ಡ್ ಸಿಬ್ಬಂದಿ ಮಧ್ಯಪ್ರವೇಶಿಸಲು ಪ್ರಯತ್ನಿಸುತ್ತಿದ್ದಂತೆ, ಇಬ್ಬರು ಆರೋಪಿಗಳು ಪೊಲೀಸ್ ಜೊತೆ ಜಗಳವಾಡಿದ್ದಾರೆ. ಅಲ್ಲದೆ ಅವರಲ್ಲೊಬ್ಬ ಐಎನ್ಎಸ್ಎಎಸ್ ರೈಫಲ್ ಅನ್ನು ಕಸಿದುಕೊಂಡಿದ್ದಾನೆ. ನಂತರ ಇಬ್ಬರು ಕೂಡ ರಾಡ್‌ನಿಂದ ಪೊಲೀಸರ ತಲೆಗೆ ಹೊಡೆದು, ರೈಫಲ್ ಸಮೇತ ಸ್ಥಳದಿಂದ ಪರಾರಿಯಾಗಿದ್ದಾರೆ.
ಗೂಂಡಾಗಳ ದಾಳಿಯಿಂದ ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ವಿಡಿಯೋವನ್ನು ದಾರಿಹೋಕರೊಬ್ಬರು ಚಿತ್ರೀಕರಿಸಿದ್ದಾರೆ.