ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವ ಭರದಲ್ಲಿ ಜನರು ಕಷಾಯ, ಅರಿಶಿನ ಹಾಲು, ನಿಂಬೆ ಪಾನಕವನ್ನು ಸೇವಿಸುತ್ತಿದ್ದಾರೆ. ಇವು ರೋಗ ನಿರೋಧಕ ಶಕ್ತಿಯನ್ನು ಬಲಪಡಿಸಬಹುದು, ಆದರೆ ಅವುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದರಿಂದ ಅನಾರೋಗ್ಯವೂ ಕಾಡಬಹುದು.
ಕಷಾಯ ಕುಡಿಯುವುದು ಆರೋಗ್ಯಕ್ಕೆ ಪ್ರಯೋಜನಕಾರಿ. ಕಷಾಯವನ್ನು ಸೇವಿಸುವುದರಿಂದ ರೋಗ ನಿರೋಧಕ ಶಕ್ತಿಯನ್ನು ಬಲಪಡಿಸಬಹುದು. ಆದರೆ ಹೆಚ್ಚಿನ ಪ್ರಮಾಣದ ಕಷಾಯವನ್ನು ಸೇವಿಸುವುದರಿಂದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಹೆಚ್ಚಿನ ಪ್ರಮಾಣದ ಕಷಾಯವನ್ನು ಸೇವಿಸುವುದರಿಂದ ಹೊಟ್ಟೆಯ ತೊಂದರೆಗಳು, ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ಕಾಡಬಹುದು.
ಕಷಾಯವನ್ನು ಪ್ರತಿ ದಿನ ಸೇವಿಸುವುದು ಒಳ್ಳೆಯದಲ್ಲ. ಒಂದು ದಿನ ಬಿಟ್ಟು ಒಂದು ದಿನ ಕಷಾಯವನ್ನು ಸೇವಿಸಬಹುದು. ದೀರ್ಘ ಕಾಲದವರೆಗೆ ಕಷಾಯವನ್ನು ಕುಡಿಯುತ್ತಿದ್ದರೆ ಸ್ವಲ್ಪ ಸಮಯ ನಿಲ್ಲಿಸಿ. ವಾರಕ್ಕೆ ಎರಡು ಮೂರು ಬಾರಿ ಕಷಾಯ ಕುಡಿಯಿರಿ.
ಅರಿಶಿನ ಹಾಲು ಆರೋಗ್ಯಕ್ಕೆ ಪ್ರಯೋಜನಕಾರಿ. ಆದರೆ ಇದನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದರಿಂದ ಹಾನಿ ಉಂಟಾಗುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಸೇವಿಸುವುದು ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಹಾಲಿಗೆ ಕಡಿಮೆ ಅರಿಶಿನ ಹಾಕಿ ಕುಡಿಯುವುದು ಒಳ್ಳೆಯದು.
ನಿಂಬೆ ಪಾನಕ ಕೂಡ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ನಿಂಬೆಯಲ್ಲಿ ವಿಟಮಿನ್ ಸಿ ಹೆಚ್ಚಿರುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ದಿನಕ್ಕೆ ಎರಡು ನಿಂಬೆ ರಸದಿಂದ ಪಾನಕ ತಯಾರಿಸಿ ಕುಡಿಯಬಹುದು. ಅದಕ್ಕಿಂತ ಹೆಚ್ಚು ಸೇವನೆ ಯೋಗ್ಯವಲ್ಲ. ಇದ್ರಿಂದ ಗ್ಯಾಸ್ಟ್ರಿಕ್, ಒತ್ತಡ ಅತಿಯಾದ ಆಸಿಡ್ ರಿಫ್ಲಕ್ಸ್ ಸಮಸ್ಯೆ ಕಾಣಿಸುತ್ತದೆ.