alex Certify ‘ಆರೋಪ’ ಹೊತ್ತು ರಾಜೀನಾಮೆ ನೀಡುತ್ತಿರುವ ಬಿಜೆಪಿ ಸರ್ಕಾರದ 3 ನೇ ಸಚಿವ ಕೆ.ಎಸ್. ಈಶ್ವರಪ್ಪ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಆರೋಪ’ ಹೊತ್ತು ರಾಜೀನಾಮೆ ನೀಡುತ್ತಿರುವ ಬಿಜೆಪಿ ಸರ್ಕಾರದ 3 ನೇ ಸಚಿವ ಕೆ.ಎಸ್. ಈಶ್ವರಪ್ಪ…!

ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದ ಜೆಡಿಎಸ್ – ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ 2019 ರ ಜುಲೈನಲ್ಲಿ ಅಧಿಕಾರಕ್ಕೆ ಬಂದಿದ್ದು, ಈವರೆಗಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಇಬ್ಬರು ಸಚಿವರು ‘ಆರೋಪ’ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಈ ಹಿಂದೆ ಅಬಕಾರಿ ಸಚಿವ ಎಚ್. ನಾಗೇಶ್ ಭ್ರಷ್ಟಾಚಾರದ ಆರೋಪದ ಕಾರಣಕ್ಕೆ 2021ರ ಜನವರಿಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಆ ಬಳಿಕ ಜಲಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಲೈಂಗಿಕ ಹಗರಣದ ಆರೋಪದ ಕಾರಣಕ್ಕೆ 2021 ರ ಮಾರ್ಚ್ ತಿಂಗಳಿನಲ್ಲಿ ರಾಜೀನಾಮೆ ಸಲ್ಲಿಸಿದ್ದರು.

ಇದೀಗ ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಕೆ.ಎಸ್. ಈಶ್ವರಪ್ಪ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...