alex Certify ‘ಆರ್ಟ್ ಆಫ್ ಲಿವಿಂಗ್’ ಆಶ್ರಮದಲ್ಲಿದ್ದ ಯುವಕ ಆತ್ಮಹತ್ಯೆಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಆರ್ಟ್ ಆಫ್ ಲಿವಿಂಗ್’ ಆಶ್ರಮದಲ್ಲಿದ್ದ ಯುವಕ ಆತ್ಮಹತ್ಯೆಗೆ ಶರಣು

ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಹರಿಯಾಣ ಮೂಲದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

30 ವರ್ಷದ ಅಂಕುಲ್ ಶರ್ಮಾ ಆತ್ಮಹತ್ಯೆಗೆ ಶರಣಾದವನಾಗಿದ್ದು, ಈತ ಕಳೆದ ಏಳು ವರ್ಷಗಳಿಂದ ಆಶ್ರಮದ ಹೌಸ್ ಕೀಪಿಂಗ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ.

ಇದರ ಮಧ್ಯೆ ವರ್ಷಗಳ ಕಾಲ ಊರಿಗೆ ತೆರಳಿದ್ದ ಈತ ಮರಳಿ ಆಶ್ರಮಕ್ಕೆ ಬಂದಿದ್ದು, ಹೌಸ್ ಕೀಪಿಂಗ್ ಕೆಲಸಕ್ಕೆ ರಜೆ ಹಾಕಿ ಆಶ್ರಮದಲ್ಲೇ ನಡೆಯುತ್ತಿದ್ದ ಬ್ರಿಡ್ಜ್ ಕೋರ್ಸ್ ತರಬೇತಿ ಪಡೆಯುತ್ತಿದ್ದ ಎನ್ನಲಾಗಿದೆ.

ಡಿಸೆಂಬರ್ 9ರಂದು ಈತ ಬ್ರಿಡ್ಜ್ ಕೋರ್ಸ್ ಗೆ ಗೈರು ಹಾಜರಾಗಿದ್ದು, ಕರೆ ಮಾಡಿದ್ದರೂ ಸ್ವೀಕರಿಸಿರಲಿಲ್ಲ. ಅನುಮಾನದ ಮೇರೆಗೆ ಹುಡುಕಾಟ ನಡೆಸಿದಾಗ ಡಿಸೆಂಬರ್ 10 ರಂದು ಈತನ ಕೊಠಡಿಯ ಬಳಿಯ ಉಗ್ರಾಣದಲ್ಲಿ ಶವ ಪತ್ತೆಯಾಗಿದೆ. ಪ್ರಕರಣದ ಕಲಿಸಿಕೊಂಡಿರುವ ಕಗ್ಗಲೀಪುರ ಠಾಣೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...