alex Certify ಆಶಾ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ : ಇಂದೇ ವೇತನ ಬಿಡುಗಡೆ ಭರವಸೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಶಾ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ : ಇಂದೇ ವೇತನ ಬಿಡುಗಡೆ ಭರವಸೆ

ಬೆಂಗಳೂರು : ಆಶಾ ಕಾರ್ಯಕರ್ತರಿಗೆ (ASHA workers) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸಿಹಿಸುದ್ದಿ ನೀಡಿದ್ದು, ಇಂದೇ ಆಶಾ ಕಾರ್ಯಕರ್ತರ ಸಂಬಳದ ಕುರಿತಂತೆ ಅಧಿಕಾರಿಗಳ ಜೊತೆಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಸಿಎಂ ಸಿದ್ದರಾಮಯ್ಯರನ್ನು ಆಶಾ ಕಾರ್ಯಕರ್ತರು ಭೇಟಿಯಾಗಿದ್ದು, ಈ ವೇಳೆ ಕಳೆದ 4 ತಿಂಗಳಿನಿಂದ ನಮಗೆ ಸಂಬಳ ಆಗಿಲ್ಲ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಇಂದು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಆಶಾ ಕಾರ್ಯಕರ್ತರ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ.

ಬಾಡಿಗೆದಾರರಿಗೆ ಉಚಿತ ವಿದ್ಯುತ್ ಕುರಿತಂತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಪಯೋಗಿಸುವ ಬಾಡಿಗೆದಾರರು ಸೇರಿದಂತೆ ಎಲ್ಲರಿಗೂ ಉಚಿತ ವಿದ್ಯುತ್ ನೀಡಲಾಗುವುದು ಎಂದು ಸ್ಪಷ್ಟನೆ ನೀಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...