ಬೆಳಗಾವಿ: ವೇದಿಕೆಯ ಮೇಲೆ ಪ್ರವಚನ ಮಾಡುತ್ತಿರುವಾಗಲೇ ತೀವ್ರ ಹೃದಯಾಘಾತಕ್ಕೊಳಗಾದ ಸ್ವಾಮೀಜಿಯೊಬ್ಬರು ಕೊನೆಯುಸಿರೆಳೆದಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಬಳೋಬಾಳ ಗ್ರಾಮದಲ್ಲಿ ನಡೆದಿದೆ.
53 ವರ್ಷದ ಸಂಗನಬಸವ ಮಹಾಸ್ವಾಮೀಜಿ ಹೃದಯಾಘಾತದಿಂದ ಮೃತಪಟ್ಟವರು. ಬಸವಯೋಗ ಮಂಟಪ ಟ್ರಸ್ಟ್ ಬಳೋಬಾಳ ಮಠದ ಸ್ವಾಮೀಜಿ ಇವರಾಗಿದ್ದು, ತಮ್ಮ ಜನ್ಮದಿನದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವೇದಿಕೆಯ ಮೇಲೆ ತಮ್ಮ ಭಕ್ತರಿಗೆ ಆಶೀರ್ವಚನ ನೀಡುತ್ತಿದ್ದರು. ಈ ವೇಳೆ ಏಕಾಏಕಿ ಕುಸಿದು ಬಿದ್ದ ಸ್ವಾಮೀಜಿ ವೇದಿಕೆಯ ಮೇಲೆಯೇ ಕೊನೆಯುಸಿರೆಳೆದಿದ್ದಾರೆ.
ನವೆಂಬರ್ 6ರಂದು ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರವಚನ ಮಾಡುತ್ತಲೇ ಭಕ್ತರ ಮುಂದೆ ಸ್ವಾಮೀಜಿ ಕೊನೆಯುಸಿರೆಳೆದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.