ಜೂನ್ 30 ರಿಂದ ಆಷಾಢಮಾಸ ಆರಂಭವಾಗಲಿದ್ದು, ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಆದರೆ ರಾಜ್ಯದಲ್ಲಿ ಕೆಲವು ದಿನಗಳಿಂದ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದರ್ಶನಕ್ಕೆ ಬರುವವರಿಗೆ ಹೊಸ ನಿಯಮಗಳನ್ನು ಜಾರಿಗೊಳಿಸಲು ಜಿಲ್ಲಾಡಳಿತ ತೀರ್ಮಾನಿಸಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಮಾಧ್ಯಮ ಪ್ರತಿನಿಧಿಗಳಿಗೆ ಈ ಕುರಿತು ಮಾಹಿತಿ ನೀಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಚಾಮುಂಡೇಶ್ವರಿ ದರ್ಶನಕ್ಕೆ ಬರುವವರು ಎರಡು ಡೋಸ್ ಕೊರೊನಾ ಲಸಿಕೆ ಹಾಕಿಸಿಕೊಂಡು ಬರುವುದು ಕಡ್ಡಾಯವಾಗಿದ್ದು, ಒಂದೊಮ್ಮೆ ಲಸಿಕೆ ಹಾಕಿಸಿಕೊಳ್ಳದಿರುವವರು ದರ್ಶನಕ್ಕೆ ಬಂದರೆ ಅಂತವರು 72 ಗಂಟೆ ಮುಂಚೆ ಕೋವಿಡ್ ಟೆಸ್ಟ್ ಮಾಡಿಸಿಕೊಂಡಿರಬೇಕು ಎಂದು ತಿಳಿಸಿದ್ದಾರೆ.