alex Certify ಆಷಾಢ ಮಾಸದಲ್ಲಿ ‘ಚಾಮುಂಡೇಶ್ವರಿ’ ದರ್ಶನಕ್ಕೆ ತೆರಳುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಷಾಢ ಮಾಸದಲ್ಲಿ ‘ಚಾಮುಂಡೇಶ್ವರಿ’ ದರ್ಶನಕ್ಕೆ ತೆರಳುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಜೂನ್ 30 ರಿಂದ ಆಷಾಢಮಾಸ ಆರಂಭವಾಗಲಿದ್ದು, ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಆದರೆ ರಾಜ್ಯದಲ್ಲಿ ಕೆಲವು ದಿನಗಳಿಂದ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದರ್ಶನಕ್ಕೆ ಬರುವವರಿಗೆ ಹೊಸ ನಿಯಮಗಳನ್ನು ಜಾರಿಗೊಳಿಸಲು ಜಿಲ್ಲಾಡಳಿತ ತೀರ್ಮಾನಿಸಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಮಾಧ್ಯಮ ಪ್ರತಿನಿಧಿಗಳಿಗೆ ಈ ಕುರಿತು ಮಾಹಿತಿ ನೀಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಚಾಮುಂಡೇಶ್ವರಿ ದರ್ಶನಕ್ಕೆ ಬರುವವರು ಎರಡು ಡೋಸ್ ಕೊರೊನಾ ಲಸಿಕೆ ಹಾಕಿಸಿಕೊಂಡು ಬರುವುದು ಕಡ್ಡಾಯವಾಗಿದ್ದು, ಒಂದೊಮ್ಮೆ ಲಸಿಕೆ ಹಾಕಿಸಿಕೊಳ್ಳದಿರುವವರು ದರ್ಶನಕ್ಕೆ ಬಂದರೆ ಅಂತವರು 72 ಗಂಟೆ ಮುಂಚೆ ಕೋವಿಡ್ ಟೆಸ್ಟ್ ಮಾಡಿಸಿಕೊಂಡಿರಬೇಕು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...