ಕೃಷಿ ಜಮೀನು, ಕೃಷಿಯೇತರ ಜಮೀನು, ನಿವೇಶನ, ಕಟ್ಟಡ ಅಪಾರ್ಟ್ಮೆಂಟ್, ಫ್ಲಾಟ್ ಸೇರಿದಂತೆ ಆಸ್ತಿ ಖರೀದಿಸುವ ಅಥವಾ ಮಾರಾಟ ಮಾಡುವ ಲೆಕ್ಕಾಚಾರದಲ್ಲಿದ್ದವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ.
ಸ್ವತ್ತುಗಳ ಮಾರಾಟ ಮತ್ತು ಖರೀದಿ ಮಾಡಲು ಮಾರ್ಗಸೂಚಿ ದರದಲ್ಲಿ ಶೇಕಡ 10 ರಿಯಾಯಿತಿ ನೀಡಲಾಗುತ್ತಿದ್ದು, ಇದನ್ನು ಜುಲೈ 24 ರ ವರೆಗೆ ವಿಸ್ತರಿಸಲಾಗಿದೆ.
ಈ ಹಿಂದೆ ಕೊರೊನಾ ಹಿನ್ನಲೆಯಲ್ಲಿ ಆಸ್ತಿ ತೆರಿಗೆ ಸಂಗ್ರಹ ಇಳಿಕೆಯಾಗಿದ್ದರ ಹಿನ್ನೆಲೆಯಲ್ಲಿ ಇದನ್ನು ಹೆಚ್ಚಿಸಲು ಕಳೆದ ಜನವರಿ 1ರಿಂದ ಮಾರ್ಚ್ 31ರವರೆಗೆ ಮಾರ್ಗಸೂಚಿ ಬೆಲೆಯಲ್ಲಿ ಶೇಕಡಾ 10 ರಿಯಾಯಿತಿ ಘೋಷಿಸಿ ಆದೇಶ ಹೊರಡಿಸಲಾಗಿತ್ತು. ಇದನ್ನು ಈಗ ಜುಲೈ 24 ರವರೆಗೆ ವಿಸ್ತರಿಸಲಾಗಿದೆ.