alex Certify ಮೃತ ರೋಗಿಯ ಚಿನ್ನಾಭರಣಗಳನ್ನೂ ಬಿಡಲಿಲ್ಲ ಕಳ್ಳರು….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೃತ ರೋಗಿಯ ಚಿನ್ನಾಭರಣಗಳನ್ನೂ ಬಿಡಲಿಲ್ಲ ಕಳ್ಳರು….!

ಕೋಲ್ಕತ್ತಾ ವೈದ್ಯಕೀಯ ಕಾಲೇಜಿನಲ್ಲಿ ಮೃತ ರೋಗಿಯ ಚಿನ್ನಾಭರಣಗಳನ್ನು ಕಳವು ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದೆ. ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾಣಿಕ್ತಾಲಾ ನಿವಾಸಿ ಸುಪ್ರಿಯಾ ದೇವಿ ಅವರು ಜ್ವರ ಮತ್ತು ಉಸಿರಾಟದ ತೊಂದರೆಯಿಂದ ವೈದ್ಯಕೀಯ ಕಾಲೇಜಿನ ಎಸ್‌ಎಸ್‌ಬಿ ವಿಭಾಗಕ್ಕೆ ದಾಖಲಾಗಿದ್ದರು. ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದ್ದರೂ ಕೂಡ ಮೂರು ದಿನಗಳ ಹಿಂದಷ್ಟೇ ಅವರು ನಿಧನರಾಗಿದ್ದಾರೆ. ಅವರ ಕುಟುಂಬ ಸದಸ್ಯರು ಆಕೆಯ ದೇಹವನ್ನು ಪಡೆಯಲು ಬಂದಾಗ, ಮಹಿಳೆಯ ದೇಹದಲ್ಲಿದ್ದ ಚಿನ್ನದ ಕಿವಿಯೋಲೆಗಳು, ಚಿನ್ನದ ಉಂಗುರ ಮತ್ತು ಕಾಲುಂಗುರಗಳು ಕಾಣೆಯಾಗಿರುವುದು ಕಂಡುಬಂದಿದೆ.

ಈ ಬಗ್ಗೆ ಕೂಡಲೇ ಮನೆಯವರು ಆಸ್ಪತ್ರೆಗೆ ದೂರು ನೀಡಿದ್ದಾರೆ. ಕೂಡಲೇ ತಪ್ಪಿತಸ್ಥರನ್ನು ಬಂಧಿಸುವಂತೆ ಬಜಾರ್ ಪೊಲೀಸರಿಗೆ ದೂರು ನೀಡಲಾಗಿದೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಗಳ ಪತ್ತೆಗೆ ಖಾಕಿ ಪಡೆ ಬಲೆ ಬೀಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...