ಆಹಾರ ಹುಡುಕಿಕೊಂಡು ಭದ್ರಾವತಿ ವಿಐಎಸ್ಎಲ್ ಕ್ವಾಟ್ರಸ್ ನ ಮನೆಯ ಹಿತ್ತಲಿನಲ್ಲಿ ಪತ್ತೆಯಾಗಿದ್ದ ಚಿರತೆಯನ್ನ ಅರಣ್ಯ ಇಲಾಖೆ ಸಿಬ್ಬಂದಿ ಸತತ ನಾಲ್ಕು ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ ಹಿಡಿದಿದ್ದಾರೆ.
ಬೆಳಗ್ಗೆ ಕಾಣಿಸಿಕೊಂಡಿದ್ದ ಚಿರತೆ ಸುತ್ತಲಿನ ನಿವಾಸಿಗಳಲ್ಲಿ ಆತಂಕ ಮೂಡಿಸಿತ್ತು. ಮಾಹಿತಿ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ ನಾಲ್ಕು ಗಂಟೆಗಳ ವರೆಗೆ ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ.
ಆಪರೇಷನ್ ಚೀತಾ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಭದ್ರಾವತಿಯ ವಿ.ಐ.ಎಸ್.ಎಲ್. ಕಾರ್ಖಾನೆ ವಸತಿ ಗೃಹದಲ್ಲಿದ್ದ ಚಿರತೆಯನ್ನ ಹಿಡಿದು ಬೋನಿಗೆ ಹಾಕಲಾಗಿದೆ. ಭಾರಿ ಪ್ರಯಾಸಪಟ್ಟು ಚಿರತೆಯನ್ನು ಸೆರೆಹಿಡಿಯಲಾದೆ. ಭಾರೀ ಸಂಖ್ಯೆಯಲ್ಲಿದ್ದ ಜನರನ್ನು ನಿಯಂತ್ರಿಸುವುದೇ ಪೊಲೀಸರಿಗೆ ಸವಾಲಾಗಿತ್ತು.
ಅರವಳಿಕೆ ನೀಡಿ, ಬಲೆ ಹಾಕಿ ಚಿರತೆ ಸೆರೆ ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ ಬೋನ್ ನಲ್ಲಿ ಕೊಂಡೊಯ್ದ ನಂತರ ಜನ ನಿಟ್ಟುಸಿರು ಬಿಟ್ಟಿದ್ದಾರೆ.