alex Certify ಆ.10 ರಿಂದ 16 ರ ವರೆಗೆ ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆ.10 ರಿಂದ 16 ರ ವರೆಗೆ ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

ಕೊರೊನಾ ಕಾರಣಕ್ಕಾಗಿ ಕಳೆದ ಎರಡು ವರ್ಷಗಳಿಂದ ತನ್ನ ಅದ್ದೂರಿತನದಿಂದ ದೂರವಾಗಿದ್ದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವವನ್ನು ಈ ಮೊದಲಿನಂತೆ ವೈಭವದಿಂದ ಆಚರಿಸಲು ಶ್ರೀ ಮಠ ತೀರ್ಮಾನಿಸಿದೆ.

ಆಗಸ್ಟ್ 10 ರಿಂದ 16 ರವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ತನ್ನ ಎಂದಿನ ಗತ ವೈಭವ ಮಾದರಿಯಲ್ಲಿ ಅದ್ದೂರಿಯಾಗಿ ನಡೆಯಲಿದ್ದು, ಇದಕ್ಕಾಗಿ ಶ್ರೀಮಠದ ವತಿಯಿಂದ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

ಆಗಮಿಸುವ ಭಕ್ತರಿಗಾಗಿ ಮೂಲ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿಗಳು ಸಹ ನಡೆಯುತ್ತಿದ್ದು, ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ. ತುಂಗಭದ್ರಾ ನದಿಯು ಸಹ ತುಂಬಿ ಹರಿಯುತ್ತಿದ್ದು, ಭಕ್ತರಿಗೆ ಪುಣ್ಯ ಸ್ನಾನ ಮಾಡುವ ಅವಕಾಶ ದಕ್ಕಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...