alex Certify ಆ. 12 ರಿಂದ 14 ರವರೆಗೆ ಚುಂಚಾದ್ರಿ ಕಪ್ ವಾಲಿಬಾಲ್ ಪಂದ್ಯಾವಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆ. 12 ರಿಂದ 14 ರವರೆಗೆ ಚುಂಚಾದ್ರಿ ಕಪ್ ವಾಲಿಬಾಲ್ ಪಂದ್ಯಾವಳಿ

ಶಿವಮೊಗ್ಗ: ನಗರದ ಆದಿಚುಂಚನಗಿರಿ ವಿದ್ಯಾಸಂಸ್ಥೆ ವತಿಯಿಂದ ಆ. 12 ರಿಂದ 14ರವರೆಗೆ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಚುಂಚಾದ್ರಿ ಕಪ್ ವಾಲಿಬಾಲ್ ಸಂಭ್ರಮ ಏರ್ಪಡಿಸಲಾಗಿದೆ ಎಂದು ಕೆ.ಎಸ್. ಶಶಿ ಹೇಳಿದರು.

ಇಂದು ಮೀಡಿಯಾ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 75ನೇ ಸ್ವಾತಂತ್ರದ ಅಮೃತ ಮಹೋತ್ಸವದ ಅಂಗವಾಗಿ, 20ನೇ ವರ್ಷದ ಹೊನಲು ಬೆಳಕಿನ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು, ಆ. 12 ರಂದು ಸಂಝೆ 7 ಗಂಟೆಗೆ ನೆಹರೂ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಕ್ರೀಡಾಕೂಟದ ದಿವ್ಯ ಸಾನಿಧ್ಯವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿ ವಹಿಸಲಿದ್ದು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿರು ದಿವ್ಯ ಉಪಸ್ಥಿತಿ ವಹಿಸುವರು ಎಂದರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ವಾಲಿಬಾಲ್ ಸಂಸ್ಥೆ ಅಧ್ಯಕ್ಷ ಭಾಸ್ಕರ್ ಜಿ. ಕಾಮತ್, ಸಂಸದ ಬಿ.ವೈ ರಾಘವೇಂದ್ರ, ಶಾಸಕ ಕೆ.ಬಿ. ಅಶೋಕ್ ನಾಯ್ಕ್, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಮೇಯರ್ ಸುನಿತಾ ಅಣ್ಣ ಮೊದಲಾದವರು ಭಾಗವಹಿಸುವರು. ಆ. 14 ರಂದು ಸಮಾರೋಪ ಸಮಾರಂಭ ಸಂಜೆ 7 ಗಂಟೆಗೆ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ.ಸಿ. ನಾರಾಯಣಗೌಡ ಬಹುಮಾನ ವಿತರಿಸುವರು. ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಡಿ.ಎಸ್. ಅರುಣ್, ಮಾಜಿ ಶಾಸಕ ಆರ್.ಕೆ. ಸಿದ್ಧರಾಮಣ್ಣ, ಮಾಜಿ ಮೇಯರ್ ಸುವರ್ಣಾ ಶಂಕರ್, ಸೂಡಾ ಅಧ್ಯಕ್ಷ ನಾಗರಾಜ್ ಮುಂತಾದವರು ಉಪಸ್ಥಿತರಿರುವರು ಎಂದರು.

ಈ ಪಂದ್ಯಾವಳಿಯಲ್ಲಿ ಪ್ರತಿ ವರ್ಷ ಶಿವಮೊಗ್ಗ ಜಿಲ್ಲೆಯ ಪ್ರೌಢಶಾಲಾ ಬಾಲಕರ ಸುಮಾರು 35 ತಂಡಗಳು, ಬಾಲಕಿಯರ 20 ತಂಡಗಳು ಭಾಗವಹಿಸಿ ಅದ್ಭುತ ಪ್ರದರ್ಶನ ನೀಡುತ್ತಿವೆ. ಈ ಪಂದ್ಯಾವಳಿಯಲ್ಲಿ ಅತ್ಯುತ್ತಮ ಆಟ ಪ್ರದರ್ಶಿಸಿದ ಬಾಲಕ, ಬಾಲಕಿಯರಿಗೆ “ಬೆಸ್ಟ್ ಅಟ್ಯಾಕರ್,ಬೆಸ್ಟ್ ಬೂಸ್ಟರ್, ಬೆಸ್ಟ್ ಆಲ್ ರೌಂಡರ್, ಬೆಸ್ಟ್ ಲೀಬ್ರೋ ” ಈ ಪ್ರಶಸ್ತಿಗಳನ್ನು ನೀಡಿ ಕ್ರೀಡಾಪಟುಗಳನ್ನು ಹುರಿದುಂಬಿಸಲಾಗುತ್ತಿದೆ, ವಿಜೇತ ತಂಡಗಳಿಗೆ ಆಕರ್ಷಕ ಪಾವತೋಷಕದೊಂದಿಗೆ ವೈಯಕ್ತಿಕ ಬಹುಮಾನಗಳನ್ನು ನೀಡಲಾಗುತ್ತಿದೆ ಎಂದರು.

ನಗದು ಬಹುಮಾನ:

ಬಾಲಕರ ವಿಭಾಗ: ಪ್ರಥಮ ಸ್ಥಾನ 5000 ರೂ., ದ್ವಿತೀಯ ಸ್ಥಾನ 4000 ರೂ., ತೃತೀಯ ಸ್ಥಾನ 3000 ರೂ. ಮತ್ತು ನಾಲ್ಕನೇ ಸ್ಥಾನ 2000 ರೂ. ನಗದು ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಗುವುದು.

ಬಾಲಕಿಯರ ವಿಭಾಗ: ಪ್ರಥಮ ಸ್ಥಾನ ಪಡೆದ ತಂಡಕ್ಕೆ 4000 ರೂ. ಮತ್ತು ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 2000 ರೂ. ನಗದು ಬಹುಮಾನ ನೀಡಿ ಪ್ರೋತ್ಸಾಹಿಸಲಾಗುವುದು.

ಆಟಗಾರರ ಅನುಕೂಲಕ್ಕಾಗಿ ಈಗಾಗಲೇ 4 ಅಂಕಣಗಳನ್ನು ಸಿದ್ಧಪಡಿಸಲಾಗಿದೆ, ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಹೊರಾಂಗಣ ಮತ್ತು ಒಳಾಂಗಣದಲ್ಲಿ ವಾಲಿಬಾಲ್ ಪಂದ್ಯಾವಳಿಯು ನಡೆಸಲಾಗುವುದು. ರಾಷ್ಟ್ರ ಮತ್ತು ರಾಜ್ಯಮಟ್ಟದ ನುರಿತ ವಾಲಿಬಾಲ್ ತೀರ್ಪುಗಾರರು ಆಗಮಿಸಲಿದ್ದಾರೆ.
ಜಿಲ್ಲೆಯ ವಿವಿಧ ತಾಲೂಕುಗಳಿಂದ ಬರುವ ಎಲ್ಲಾ ಕ್ರೀಡಾಪಟುಗಳಿಗೂ ವಸತಿ ಹಾಗೂ ಊಟದ ವ್ಯವಸ್ಥೆಯನ್ನೂ ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿದೆ. ಈ ವರ್ಷದ ಪಂದ್ಯಾವಳಿಯು ಜಿಲ್ಲಾ ಮಟ್ಟದಲ್ಲಿ ನಡೆಸಲಾಗುತ್ತಿದ್ದು, ಜಿಲ್ಲೆಯ 17 ವರ್ಷದ ವಯೋಮಿತಿ ಒಳಗಿನ ಕ್ರೀಡಾಪಟುಗಳನ್ನೊಳಗೊಂಡ ಪ್ರೌಢಶಾಲಾ ತಂಡಗಳು ಭಾಗವಹಿಸಬಹುದಾಗಿದೆ.

ವಾಲಿಬಾಲ್ ಪಂದ್ಯಾವಳಿ ಜೊತೆಗೆ ಬಾಲಕರು ಮತ್ತು ಬಾಲಕಿಯರಿಗಾಗಿ ರಸ್ತೆ ಓಟ ಸ್ಪರ್ಧೆ ಕೂಡ ಹಮ್ಮಿಕೊಳ್ಳಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಕೊಳಗಿ ವಾಸಪ್ಪಗೌಡ, ಸತೀಶ್, ಪ್ರಾಂಶುಪಾಲೆ ಹೇಮಾ, ಯಶವಂತ್ ನಾಯ್ಕ್, ಮೇಘರಾಜ್, ಸುಜಾತಾ ಮುಂತಾದವರಿದ್ದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...