alex Certify ಇಂಗ್ಲೆಂಡ್‌ ನೆಲದಲ್ಲಿ ರಿಷಭ್‌ ಪಂತ್‌ ಭರ್ಜರಿ ಬ್ಯಾಟಿಂಗ್‌, ಮೊದಲ ದಿನವೇ ಐತಿಹಾಸಿಕ ಶತಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂಗ್ಲೆಂಡ್‌ ನೆಲದಲ್ಲಿ ರಿಷಭ್‌ ಪಂತ್‌ ಭರ್ಜರಿ ಬ್ಯಾಟಿಂಗ್‌, ಮೊದಲ ದಿನವೇ ಐತಿಹಾಸಿಕ ಶತಕ

ಬರ್ಮಿಂಗ್ ಹ್ಯಾಮ್‌ನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದ ಮೊದಲ ದಿನವೇ ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ಇಂಗ್ಲೆಂಡ್ ಬೌಲರ್‌ಗಳನ್ನು ದಂಡಿಸಿದ್ದಾರೆ. ಭರ್ಜರಿ ಬ್ಯಾಟಿಂಗ್‌ ಮಾಡಿದ ರಿಷಬ್ ಪಂತ್ ತಮ್ಮ ಟೆಸ್ಟ್ ಜೀವನದ ಐದನೇ ಶತಕ ಗಳಿಸಿದ್ರು.

94 ಎಸೆತಗಳಲ್ಲಿ 16 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 107 ರನ್ ಬಾಚಿಕೊಂಡ ಪಂತ್‌, ಹೊಸ ದಾಖಲೆ ಮಾಡಿದ್ದಾರೆ. ಕೇವಲ 98 ರನ್‌ಗಳಿಗೆ 5 ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿದ್ದ ಭಾರತಕ್ಕೆ ಆಸರೆಯಾದ ರಿಷಭ್‌ ಪಂತ್‌, ಬಿರುಸಿನ ಬ್ಯಾಟಿಂಗ್‌ ಮಾಡಿದ್ರು.

ತಂಡವನ್ನು ಕಠಿಣ ಪರಿಸ್ಥಿತಿಯಿಂದ ಹೊರತಂದ್ರು. ಇಂಗ್ಲೆಂಡ್‌ನ ಜೇಮ್ಸ್ ಆಂಡರ್ಸನ್, ಬೆನ್ ಸ್ಟೋಕ್ಸ್ ಮತ್ತು ಜಾಕ್ ಲೀಚ್ ಅವರಂತಹ ಅಪಾಯಕಾರಿ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ್ರು. ಆಕರ್ಷಕ ಬ್ಯಾಟಿಂಗ್‌ ಮೂಲಕ ಸೆಂಚುರಿ ಸಿಡಿಸಿದ್ರು. ಇದು ಇಂಗ್ಲೆಂಡ್ ನೆಲದಲ್ಲಿ ರಿಷಬ್ ಪಂತ್ ಅವರ ಎರಡನೇ ಟೆಸ್ಟ್ ಶತಕ. ಇದಕ್ಕೂ ಮೊದಲು 2018ರಲ್ಲಿ ಇಂಗ್ಲೆಂಡ್ ವಿರುದ್ಧ ಓವಲ್‌ನಲ್ಲಿ 114 ರನ್ ಗಳಿಸಿದ್ದ ಪಂತ್‌, ಟೆಸ್ಟ್ ವೃತ್ತಿ ಜೀವನದ ಮೊದಲ ಶತಕಕ್ಕೆ ಭಾಜನರಾಗಿದ್ದರು.

ರಿಷಬ್ ಪಂತ್ ಇಂಗ್ಲೆಂಡ್ ನೆಲದಲ್ಲಿ ಎರಡು ಟೆಸ್ಟ್ ಶತಕಗಳನ್ನು ಗಳಿಸಿದ ಮೊದಲ ಭಾರತೀಯ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಭಾರತದ ಮಾಜಿ ನಾಯಕ ಮತ್ತು ಅನುಭವಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಮಹೇಂದ್ರ ಸಿಂಗ್ ಧೋನಿ ತಮ್ಮ ಇಡೀ ಟೆಸ್ಟ್ ವೃತ್ತಿ ಜೀವನದಲ್ಲಿ ಇಂತಹ ಸಾಧನೆ ಮಾಡಲು ಸಾಧ್ಯವಾಗಲಿಲ್ಲ. ರಿಷಬ್ ಪಂತ್ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಈ ಮೂರು ದೇಶಗಳಲ್ಲಿ ಟೆಸ್ಟ್ ಶತಕ ಗಳಿಸಿದ ಮೊದಲ ಭಾರತೀಯ ವಿಕೆಟ್-ಕೀಪರ್ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನೂ ತಮ್ಮದಾಗಿಸಿಕೊಂಡಿದ್ದಾರೆ. ಪಂತ್‌ಗಿಂತ ಮೊದಲು ಇಂಗ್ಲೆಂಡ್ ನೆಲದಲ್ಲಿ ಯಾವುದೇ ಭಾರತೀಯ ವಿಕೆಟ್-ಕೀಪರ್ ಬ್ಯಾಟ್ಸ್‌ಮನ್‌ ಟೆಸ್ಟ್ ಶತಕ ಗಳಿಸಿರಲಿಲ್ಲ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...