alex Certify ಇಂಜಿನಿಯರಿಂಗ್ ಸೀಟ್ ಕೊಡಿಸುವುದಾಗಿ ಯುವತಿಗೆ ವಂಚನೆ; ಖತರ್ನಾಕ್ ಆರೋಪಿ ಅಂದರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂಜಿನಿಯರಿಂಗ್ ಸೀಟ್ ಕೊಡಿಸುವುದಾಗಿ ಯುವತಿಗೆ ವಂಚನೆ; ಖತರ್ನಾಕ್ ಆರೋಪಿ ಅಂದರ್

ಬೆಂಗಳೂರು: ರೇವಾ ಕಾಲೇಜಿನಲ್ಲಿ‌ ಕಂಪ್ಯೂಟರ್‌ ಸೈನ್ಸ್‌ ವಿಭಾಗದಲ್ಲಿ ಇಂಜಿನಿಯರಿಂಗ್ ಸೀಟ್ ಕೊಡಿಸುವುದಾಗಿ ಹೇಳಿ ಯುವತಿಗೆ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬೆಂಗಳೂರು ಈಶಾನ್ಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ರಾಜೇಶ್ವರ್ ಎಂದು ತಿಳಿದುಬಂದಿದೆ. ರೇವಾ ಕಾಲೇಜಿನಲ್ಲಿ ಇಂಜಿನಿಯರಿಂಗ್ ಸೀಟ್ ಕೊಡಿಸುವುದಾಗಿ ಹೇಳಿ ಯುವತಿಯಿಂದ 1 ಲಕ್ಷದ 27 ಸಾವಿರ ರೂಪಾಯಿ ಹಣ ಪಡೆದು ವಂಚಿಸಿದ್ದ.

ಕಾಲೇಜಿನಲ್ಲಿ ಎಸಿಎಂ ಬ್ರಾಂಚ್ ಪಡೆದಿದ್ದ ಯುವತಿ ಕಂಪ್ಯೂಟರ್ ಸೈನ್ಸ್ ಸೀಟ್ ಗಾಗಿ ಪ್ರಯತ್ನಿಸುತ್ತಿದ್ದಳು. ಈ ವೇಳೆ ಕಂಪ್ಯೂಟರ್ ಸೈನ್ಸ್ ಸೀಟ್ ಖಾಲಿಯಾಗಿದೆ ಹಣ ನೀಡಿದರೆ ಸೀಟ್ ಕೊಡಿಸುವುದಾಗಿ ಆರೋಪಿ ಫೋನ್ ಮಾಡಿ ತಿಳಿಸಿದ್ದ. ಅದರಂತೆ ಯುವತಿ ತನ್ನ ತಂದೆ ಮೂಲಕ ಆರೋಪಿ ಅಕೌಂಟ್ ಗೆ ಹಣ ವರ್ಗಾವಣೆ ಮಾಡಿದ್ದಳು. ಹಣ ಪಡೆದ ಆರೋಪಿ ಮೊಬೈಲ್ ಸ್ವಿಚ್ಡ್ ಆಫ್ ಮಾಡಿದ್ದ.

ಈ ಬಗ್ಗೆ ಯುವತಿ ಕಾಲೇಜಿನಲ್ಲಿ ವಿಚಾರಿಸಿದಾಗ ಆತ ಕಾಲೇಜು ಸಿಬ್ಬಂದಿಯೇ ಅಲ್ಲ ಎಂಬುದು ಗೊತ್ತಾಗಿತ್ತು. ಯುವತಿ ಹಾಗೂ ಆಕೆಯ ತಂದೆ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆರೋಪಿಯಿಂದ 4 ಲ್ಯಾಪ್ ಟಾಪ್, 3 ಮೊಬೈಲ್, 7 ಸಿಮ್ ಕಾರ್ಡ್, 21 ಗ್ರಾಂ ಚಿನ್ನದ ಚೈನ್, 3 ಚಿನ್ನದ ನಾಣ್ಯ, 1 ಲಕ್ಷದ 72 ಸಾವಿರ ಹಣ ವಶಕ್ಕೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...